Breaking News

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ್ ಹೈಸ್ಪೀಡ್ ರೈಲು ಸೇವೆಗೆ ಚಾಲನೆ

Spread the love

ಮಂಗಳೂರು: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ವಂದೇ ಭಾರತ್ ಲೋಕಾರ್ಪಣೆ ಜೊತೆಗೆ ವಿವಿಧ ರೈಲು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದರು. ನವೀಕರಣಗೊಂಡ ಸುಬ್ರಹ್ಮಣ್ಯ ರಸ್ತೆ ರೈಲ್ವೆ ನಿಲ್ದಾಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕೇಂದ್ರ ಸಚಿವರು, ಮಂಗಳೂರು-ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಬಹುಕಾಲದ ಕನಸಾಗಿತ್ತು. ಕಾಮಗಾರಿ ಅನುಷ್ಠಾನದ ವೇಳೆ ಹಲವು ಸವಾಲುಗಳು ಎದುರಾದರೂ ಎಲ್ಲ ಅಡೆತಡೆಗಳನ್ನು ಯಶಸ್ವಿಯಾಗಿ ನಿವಾರಿಸಿದ್ದೇವೆ ಎಂದರು. ಇದೇ ವೇಳೆ ಈ ಯೋಜನೆ ಸಾಕಾರಗೊಳ್ಳಲು ಶ್ರಮಿಸಿದ ರೈಲ್ವೆ ಅಧಿಕಾರಿಗಳನ್ನು ಅಭಿನಂದಿಸಿದರು.

ಇದಕ್ಕೂ ಮುನ್ನ ಉಡುಪಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಮಹತ್ವದ ಮಾಹಿತಿ ಉಡುಪಿ ರೈಲ್ವೆ ನಿಲ್ದಾಣವನ್ನು ಸ್ಥಳೀಯ ಪಾರಂಪರಿಕ ಶೈಲಿಯಲ್ಲಿ ಮೇಲ್ದರ್ಜೆಗೇರಿಸುವುದರ ಜತೆಗೆ ಬೈಂದೂರು ರೈಲ್ವೆ ನಿಲ್ದಾಣದ ಅಭಿವೃದ್ಧಿಗೂ ಚಿಂತನೆ ನಡೆಸಲಾಗುವುದು ಎಂದರು.

ಉಡುಪಿ ಪ್ರಮುಖ ಧಾರ್ಮಿಕ ಹಾಗೂ ಶಿಕ್ಷಣ ಕೇಂದ್ರವಾಗಿರುವುದರಿಂದ, ಸ್ಥಳೀಯ ಪಾರಂಪರಿಕ ಶೈಲಿಯನ್ನು ಅಳವಡಿಸಿಕೊಂಡು ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ ಎಂದರು. ಇತ್ತ 22 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಚಾಮರಾಜನಗರ ರೈಲು ನಿಲ್ದಾಣವನ್ನು ವರ್ಚುವಲ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದರು.


Spread the love

About Laxminews 24x7

Check Also

ಕೆರೆಗೆ ಬಿದ್ದಿದ್ದ ಹೋರಿ ರಕ್ಷಿಸಲು ಹೋಗಿ ಯುವಕ ಸಾವು

Spread the loveಶಿವಮೊಗ್ಗ: ಕೆರೆಗೆ ಬಿದ್ದು ಒದ್ದಾಡುತ್ತಿದ್ದ ಹೋರಿ ರಕ್ಷಿಸಲು ಹೋಗಿ ಯುವಕನೊಬ್ಬ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಶಿಕಾರಿಪುರ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ