Breaking News

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ

Spread the love

ಬಳ್ಳಾರಿ: ಇಂದು ನಡೆಯಬೇಕಿದ್ದ ಬಳ್ಳಾರಿ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ದಿಢೀರ್ ಮುಂದೂಡಿಕೆ ಮಾಡಲಾಗಿದೆ.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರ್ ನಸೀಮ್ ಅವರಿಗೆ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

24ನೇ ಅವಧಿಯಲ್ಲಿ ಮೇಯರ್ ಆಗಿದ್ದ ಪಿ. ಗಾದೆಪ್ಪ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ನೂತನ ಮೇಯರ್ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ಈ ಸಂಬಂಧ ಪಾಲಿಕೆಯ ಸರ್ವ ಸದಸ್ಯರಿಗೂ ಈಗಾಗಲೇ ಅಧಿಕೃತ ನೋಟಿಸ್ ಜಾರಿ ಮಾಡಲಾಗಿತ್ತು. ನಿಯಮದ ಪ್ರಕಾರ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಮೇಲುಸ್ತುವಾರಿ ಹಾಗೂ ಸಮ್ಮುಖದಲ್ಲಿಯೇ ಚುನಾವಣಾ ಪ್ರಕ್ರಿಯೆ ನಡೆಯಬೇಕಿದೆ. ಆದರೆ, ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಜಹೀರ್ ನಸೀಮ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಅನಿವಾರ್ಯವಾಗಿ ಚುನಾವಣೆಯನ್ನು ಮುಂದೂಡಲಾಗಿದೆ.

ಸದ್ಯ ಚುನಾವಣೆ ಮುಂದೂಡಿಕೆಯಾಗಿದ್ದು, ಮುಂದಿನ ಚುನಾವಣಾ ದಿನಾಂಕವನ್ನು ಇನ್ನೂ ಘೋಷಣೆ ಮಾಡಿಲ್ಲ. ಇನ್ನು ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಇರುವುದರಿಂದ, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.


Spread the love

About Laxminews 24x7

Check Also

ಕೆರೆಗೆ ಬಿದ್ದಿದ್ದ ಹೋರಿ ರಕ್ಷಿಸಲು ಹೋಗಿ ಯುವಕ ಸಾವು

Spread the loveಶಿವಮೊಗ್ಗ: ಕೆರೆಗೆ ಬಿದ್ದು ಒದ್ದಾಡುತ್ತಿದ್ದ ಹೋರಿ ರಕ್ಷಿಸಲು ಹೋಗಿ ಯುವಕನೊಬ್ಬ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಶಿಕಾರಿಪುರ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ