Breaking News

ಅಸ್ಸಾಂನಲ್ಲಿ ಕರ್ನಾಟಕ ನೋಂದಣಿಯ ಕಂಟೈನರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ – 23 ಮಂದಿ ದುರ್ಮರಣ

Spread the love

ದಿಸ್ಪುರ್‌: ಅಸ್ಸಾಂನ ಕಾಜಿರಂಗದಲ್ಲಿ  ಕರ್ನಾಟಕ ನೋಂದಣಿಯ ಕಂಟೈನರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ 23 ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ.

ಬೊಕಾಖಾಟ್‌ನಿಂದ (Bokakhat) ನಗಾಂವ್ ಕಡೆಗೆ ಪ್ರಯಾಣಿಸುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಕಂಟೈನರ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ರಕ್ಷಣಾ ತಂಡಗಳು ಮೃತದೇಹಗಳನ್ನು ಹೊರತೆಗೆಯುವ ಕಾರ್ಯವನ್ನು ನಡೆಸಿದ್ದು,  ಅಪಘಾತದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಸ್ಥಳೀಯ ನಿವಾಸಿಗಳು ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೊಹೊರಾ ಮಾದರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೋರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯು ಇನ್ನೂ ಮುಂದುವರಿದಿದ್ದು, ಸಾವಿನ ಸಂಖ್ಯೆ ಅಧಿಕೃತವಾಗಿ ಇನ್ನೂ ದೃಢಪಟ್ಟಿಲ್ಲ.

ಘಟನೆ ಕುರಿತು ಗೋಲಾಘಾಟ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ ಮಾತನಾಡಿ, ಅಪಘಾತದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಜ್ಜುಗುಜ್ಜಾದ ಟೆಂಪೋ ಟ್ರಾವೆಲರ್‌ನಿಂದ ರಕ್ಷಣಾ ತಂಡಗಳು ಇನ್ನೂ ಮೃತದೇಹಗಳನ್ನು ಹೊರತೆಗೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಶಾಸಕರೂ ಆಗಿರುವ ಅಸ್ಸಾಂ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಅತುಲ್ ಬೋರಾ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಟೆಂಪೋ ಟ್ರಾವೆಲರ್ ಅತಿವೇಗದಲ್ಲಿ ಚಲಿಸುತ್ತಿತ್ತು ಮತ್ತು ಉದ್ಯಾನವನದ ಬಳಿ ವಿಧಿಸಲಾದ ನಿಬಂಧನೆಗಳನ್ನು ಉಲ್ಲಂಘಿಸಿದೆ. ಎಂದು ದೇಕಾ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೆರೆಗೆ ಬಿದ್ದಿದ್ದ ಹೋರಿ ರಕ್ಷಿಸಲು ಹೋಗಿ ಯುವಕ ಸಾವು

Spread the loveಶಿವಮೊಗ್ಗ: ಕೆರೆಗೆ ಬಿದ್ದು ಒದ್ದಾಡುತ್ತಿದ್ದ ಹೋರಿ ರಕ್ಷಿಸಲು ಹೋಗಿ ಯುವಕನೊಬ್ಬ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಶಿಕಾರಿಪುರ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ