ಚಿಕ್ಕಮಗಳೂರು: ಮಹೀಂದ್ರಾ ಥಾರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೆಸ್ಕಾಂ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಡೂರು ಸಮೀಪದ ಬುಕ್ಕಸಾಗರ ಗೇಟ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೆಸ್ಕಾಂನ ಎಇ ಸನತ್ (49) ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡ ಮೂವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ನಜ್ಜುಗುಜ್ಜಾಗಿವೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7