Breaking News

ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ ಪದ್ಮನಾಭ ಗೌಡ ನಿಧನ

Spread the love

ಉಡುಪಿ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಿ ಪದ್ಮನಾಭ ಗೌಡ (75)  ಇಂದು ನಿಧನರಾಗಿದ್ದಾರೆ.

ಅಸಂಖ್ಯಾತ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರವಾಗಿದ್ದ ಇವರು, ಯಕ್ಷಗಾನ ಕಲಾವಿದ, ಕಾರ್ಕಳ ಸಾಹಿತ್ಯ ಸಂಘದ ಕಾರ್ಯದರ್ಶಿ, ಸಂಘಟಕರಾಗಿ ಗುರುತಿಸಿಕೊಂಡಿದ್ರು. ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆ ಮಾತ್ರವಲ್ಲದೇ ಸಾಂಸ್ಕೃತಿಕ ಲೋಕದ ಪರಿಚಯವನ್ನ ಮಾಡಿಕೊಟ್ಟ ಕೀರ್ತಿ ಇವರಿಗೆ ಸಲ್ಲುತ್ತದೆ.

ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಿಗೆ ಒತ್ತು ಕೊಟ್ಟು ಸದಾ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ‌ ಶ್ರಮಿಸುತ್ತಿದ್ದರು. ಕಾಲೇಜಿನ ಕ್ಯಾಂಪಸ್ ನಲ್ಲಿ ಯಕ್ಷಗಾನ ಪ್ರೇಮವನ್ನು ಭಿತ್ತಿ ಕಲಾಪ್ರೇಮವನ್ನು ವಿದ್ಯಾರ್ಥಿಗಳಲ್ಲಿ ತುಂಬಿದವರು. ವಿದ್ಯಾರ್ಥಿಗಳ ಮನೋವಿಕಸನಕ್ಕೆ ಪೂರಕ ವಾತಾವರಣವನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ತಂದುಕೊಟ್ಟ ಹೆಗ್ಗಳಿಕೆ ಇವರದ್ದು.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ