Breaking News

ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಬಂದ ಭೂಗತ ಪಾತಕಿ ರವಿ ಪೂಜಾರಿ

Spread the love

ಉಡುಪಿ: ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಉಡುಪಿಗೆ ಆಗಮಿಸಿದ್ದಾನೆ.

ಹೃದಯಾಘಾತದಿಂದ ನಿಧನ ಹೊಂದಿದ ತಾಯಿ ಸುಶೀಲಾ ಪೂಜಾರ್ತಿ ಅವರ ಅಂತ್ಯಸಂಸ್ಕಾರ ಇಂದು ಮಲ್ಪೆಯ ನೆರ್ಗಿಯ ಹಿರಿಯ ಮನೆಯಲ್ಲಿ ನಡೆಯಲಿದೆ.

ನ್ಯಾಯಾಲಯದ ವಿಶೇಷ ಅನುಮತಿ ಮೇರೆಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ರವಿ ಪೂಜಾರಿಯನ್ನ ಬೆಂಗಳೂರಿನಿಂದ ಉಡುಪಿಗೆ ಕರೆತರಲಾಗಿದೆ. ಅಂತ್ಯಕ್ರಿಯೆ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಮತ್ತೆ ಬೆಂಗಳೂರಿಗೆ ಕರೆದೊಯ್ಯುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಸಕ್ರಿಯವಾಗಿದ್ದ ರವಿ ಪೂಜಾರಿ ಇದೀಗ ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸ್ವಗ್ರಾಮಕ್ಕೆ ಆಗಮಿಸಿದ್ದಾನೆ. ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ ಅವರು ಮೊನ್ನೆ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಐವರು ಮಕ್ಕಳಲ್ಲಿ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮೂವರು ಗಂಡು ಮಕ್ಕಳಿದ್ದು, ಅವರಲ್ಲಿ ರವಿ ಪೂಜಾರಿ ಕೂಡ ಒಬ್ಬ.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ