ಶಿವಮೊಗ್ಗ: ಮನೆ ಮುಂದೆ ಮಲಗಿದ್ದ ನಾಯಿಯನ್ನು ಚಿರತೆ (Leopard) ಎಳೆದೊಯ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಬುಕ್ಲಾಪುರ ಗ್ರಾಮದಲ್ಲಿ ನಡೆದಿದೆ.
ಚಿರತೆ ನಾಯಿಯನ್ನು ಎಳೆದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ರೈತರು ಹಾಗೂ ಕೂಲಿ ಕಾರ್ಮಿಕರು ಕೆಲಸಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮದಲ್ಲಿ ರೈತರು ಹಾಗೂ ಜನ ಎಚ್ಚರಿಕೆಯಿಂದ ಸಂಚರಿಸಬೇಕು. ಅಲ್ಲದೇ ಅರಣ್ಯ ಭಾಗಗಳಲ್ಲಿ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮನವಿ ಮಾಡಿದ್ದಾರೆ.
Laxmi News 24×7