Breaking News

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ

Spread the love

ಬೆಳಗಾವಿ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ನೀಡಿದೆ‌. ಮಹತ್ವಾಕಾಂಕ್ಷೆಯ ಈ ಕಳಸಾ – ಬಂಡೂರಿ ಕುಡಿಯುವ ನೀರಿನ‌ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ‌ ಅನುಮೋದನೆ‌ ಸಿಕ್ಕಿದೆ.  ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅಭಿನಂದಿಸಿದ್ದಾರೆ.

ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದೆ. ಇಂತಹ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರ್ಕಾರ ಕಟಿಬದ್ಧವಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಕೊರೋನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಲೂಟಿ : ಚಿಕಿತ್ಸೆ ನೀಡದೇ ಇದ್ದರೂ ದುಬಾರಿ ಬಿಲ್ ನೀಡಿದ ಆಸ್ಪತ್ರೆ

ಕಳಸಾ, ಬಂಡೂರಿ ಯೋಜನೆ ಜಾರಿಯಾಗುವುದರಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ ಸೇರಿ 14 ತಾಲೂಕಿನ ಕುಡಿಯುವ ನೀರಿನ ಬವಣೆ ಕಡಿಮೆಯಾಗಲಿದೆ. ಈ ಯೋಜನೆಗಾಗಿ ಅನೇಕ ವರ್ಷಗಳಿಂದ ಹೋರಾಟ ಮಾಡಿದ್ದ ರೈತರ ಸರ್ಕಾರದ ಒಪ್ಪಿಗೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಹದಾಯಿ ನದಿಯನ್ನು ಗೋವಾದ ಜೀವನದಿ ಎಂದು ಕರೆಯುತ್ತಾರೆ. ಆದರೆ, ಈ ನದಿ ಹುಟ್ಟುವುದು ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ. ಬೆಳಗಾವಿಯಲ್ಲಿ ಹುಟ್ಟುವ ನದಿ ಗೋವಾ ಮೂಲಕ ಹರಿದು ಸಮುದ್ರ ಸೇರುತ್ತದೆ. ಕರ್ನಾಟಕದ ಮೂಲಕ ಹರಿದು ಹೋಗುವ ನೀರನ್ನು ಬಳಸಿಕೊಂಡು, ನೀರನ್ನು ಮಲಪ್ರಭಾ ಡ್ಯಾಂನಲ್ಲಿ ಸಂಗ್ರಹಿಸಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಮಹಾದಾಯಿ ಅಥವ ಕಳಸಾ-ಬಂಡೂರಿ ಯೋಜನೆ.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ