Breaking News

ಬೆಳಗಾವಿಯಲ್ಲಿ ಕಬ್ಬಿನ ದರ ಪೈಪೋಟಿ – ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ 3,800 ದರ ಘೋಷಣೆ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ನಡುವೆ ಕಬ್ಬಿನ ದರ ನಿಗದಿ ವಿಚಾರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇದೀಗ ಗೋಕಾಕ್ ಪಟ್ಟಣದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿಗೆ ಪ್ರತಿ ಟನ್ ಕಬ್ಬಿಗೆ 3,800 ರೂ. ದರ ಘೋಷಿಸಿದೆ.

ಕಾರ್ಖಾನೆಯ ನಿರ್ದೇಶಕರಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಈ ದರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, “ಈ ಮೊದಲು ಕಾರ್ಖಾನೆಯ ವತಿಯಿಂದ ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನೀಡಲು ನಿಗದಿಪಡಿಸಲಾಗಿತ್ತು. ಆದರೆ ಇದೀಗ ಜಿಲ್ಲೆಯ ಬೇರೆ ಬೇರೆ ಸಕ್ಕರೆ ಕಾರ್ಖಾನೆಗಳು ಕಬ್ಬಿನ ದರವನ್ನು ಏರಿಕೆ ಮಾಡಿವೆ. ಹೀಗಾಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿರ್ದೇಶನದಂತೆ ಪ್ರಸಕ್ತ ಹಂಗಾಮಿಗೆ 3,600 ರೂ. ಬದಲಾಗಿ ಮೊದಲ ಕಂತಿನಲ್ಲಿ 3,800 ರೂ. ದರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಸಕ್ಕರೆ ದರ ನಿಗದಿಯಾದ ಬಳಿಕ ರೈತರಿಗೆ ಎರಡನೇ ಕಂತಿನ ಹಣವನ್ನು ಸಹ ಪಾವತಿಸಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಶೀಲ ಶಂಕಿಸಿ ಪತ್ನಿಯ ಬರ್ಬರ ಹತ್ಯೆ – ಪಿಕಾಸಿಯಲ್ಲಿ ಹೊಡೆದು ಕೊಲೆಗೈದ ಪಾಪಿ ಪತಿ

Spread the loveಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯ ಬರ್ಬರ ಹತ್ಯೆಗೈದಿರುವ ಘಟನೆ ಮಾರತಹಳ್ಳಿ (Bengaluru Crime) ಪೊಲೀಸ್ ಠಾಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ