ನವದೆಹಲಿ: ಕರ್ನಾಟಕ ಮತ್ತು ಮೇಘಾಲಯ ರಾಜ್ಯಗಳಲ್ಲಿ 2027ರ ಜನವರಿ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.
ಈ ಸಂಬಂಧ ಎರಡೂ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಆಯೋಗ ಪತ್ರ ಬರೆದಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸಲು ಸೂಚಿಸಿದೆ. ಯುವ ಮತದಾರರು ಹಾಗೂ ಮೊದಲ ಬಾರಿಗೆ ಮತದಾನಕ್ಕೆ ಅರ್ಹರಾಗುವವರ ಹೆಸರು ನೋಂದಣಿಗೆ ವಿಶೇಷ ಆದ್ಯತೆ ನೀಡುವಂತೆ ತಿಳಿಸಿದೆ.
Laxmi News 24×7