Breaking News

ಮಲಪ್ರಭಾ ಬಲದಂಡೆ ಕಾಲುವೆಗೆ 10 ದಿನ ನೀರು ಬಿಡುಗಡೆ; ಕೃಷಿ ಚಟುವಟಿಕೆಗೆ ಬಳಸದಂತೆ ಸೂಚನೆ

Spread the love

ಧಾರವಾಡ: ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ಮಲಪ್ರಭಾ ಬಲದಂಡೆ  ಕಾಲುವೆಗೆ 10 ದಿನಗಳ ಕಾಲ ನೀರು ಹರಿಸಲು ಆದೇಶ ಹೊರಡಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರು ಈ ಆದೇಶ ನೀಡಿದ್ದಾರೆ.

ಬಲದಂಡೆ ಕಾಲುವೆ ವ್ಯಾಪ್ತಿಗೆ ಬರುವ ಕೆರೆ ಹಾಗೂ ಕಟ್ಟೆಗಳನ್ನು ತುಂಬಿಸುವ ಮೂಲಕ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಜಲಾಶಯದಿಂದ ಕಾಲುವೆಗೆ ನೀರು ಹರಿಸಲಾಗಿದೆ.

ರೈತರ ಒತ್ತಾಯಕ್ಕೆ ಸ್ಪಂದನೆ
ಬರಗಾಲದ ಹಿನ್ನೆಲೆಯಲ್ಲಿ ನವಲಗುಂದ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿತ್ತು. ಹೀಗಾಗಿ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಬೇಕು ಎಂದು ಸ್ಥಳೀಯ ರೈತರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ 500 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಕೃಷಿ ಚಟುವಟಿಕೆಗೆ ನೀರು ಬಳಸದಂತೆ ಸೂಚನೆ
ಬಿಡುಗಡೆಯಾಗಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ರೈತರು ಈ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.


Spread the love

About Laxminews 24x7

Check Also

ಶೀಲ ಶಂಕಿಸಿ ಪತ್ನಿಯ ಬರ್ಬರ ಹತ್ಯೆ – ಪಿಕಾಸಿಯಲ್ಲಿ ಹೊಡೆದು ಕೊಲೆಗೈದ ಪಾಪಿ ಪತಿ

Spread the loveಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯ ಬರ್ಬರ ಹತ್ಯೆಗೈದಿರುವ ಘಟನೆ ಮಾರತಹಳ್ಳಿ (Bengaluru Crime) ಪೊಲೀಸ್ ಠಾಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ