Breaking News

ಬ್ಯಾಡಗಿ ಬಳಿ ಲಾರಿಗೆ ಬಸ್ ಡಿಕ್ಕಿ – 25ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

Spread the love

ಹಾವೇರಿ: ಬ್ಯಾಡಗಿ ತಾಲೂಕಿನ ಛತ್ರದ ಬಳಿ ಪ್ರವಾಸಿಗರಿದ್ದ ಬಸ್‌ , ಲಾರಿಗೆ ಡಿಕ್ಕಿ  ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಪ್ರವಾಸಕ್ಕೆ ಬಂದಿದ್ದ ಬಸ್‌ ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ  ವಾಪಸ್‌ ಆಗುತ್ತಿತ್ತು. ಈ ವೇಳೆ ಛತ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸಿನಿಮಾ ನಟರ ವಿರುದ್ಧ ಯುಟಿ ಖಾದರ್ ಅಸಮಾಧಾನ

Spread the loveಬೆಂಗಳೂರು: ಸಿನಿಮಾಗಳಲ್ಲಿ ನಟರು ಸಿಗರೇಟ್  ಹಿಡಿದು ಪೋಸ್ ಕೊಡುವುದನ್ನು ನೋಡಿ ಯುವಜನತೆ ಪ್ರೇರಣೆಗೊಂಡು ದಾರಿ ತಪ್ಪಬಾರದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ