Breaking News

ಸಹಾಯಧನ ಪಡೆಯಲು ಅರ್ಜಿ ಆಹ್ವಾನ: ಡಿ.31 ಕೊನೆಯ ದಿನ

Spread the love

ಗ್ರಾಮೀಣ ಕುಶಲಕರ್ಮಿಗಳು ಹಾಗೂ ಅತಿ ಸಣ್ಣ ಕೈಗಾರಿಕಾ ಘಟಕಗಳಿಗೆ ಬಡ್ಡಿ ಸಹಾಯಧನ ನೀಡುವ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಮತ್ತು ಸಣ್ಣ ಉದ್ಯಮ ಇಲಾಖೆ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಬಡಗಿ, ಕ್ಷೌರಿಕರು, ಧೋಬಿಗಳು, ಕಲ್ಲುಕುಟಿಗರು, ಚರ್ಮಗಾರರು, ಕಮ್ಮಾರರು, ಕುಂಬಾರರು, ಜನರಲ್ ಇಂಜಿನಿಯರಿಂಗ್, ಬ್ಯೂಟಿ ಪಾರ್ಲರ್, ಬೆತ್ತದ ಕೆಲಸ, ಕರಕುಶಲ ವಸ್ತುಗಳ ತಯಾರಿಕೆ ಹಾಗೂ ಬಟ್ಟೆ ನೇಯ್ಗೆ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಗ್ರಾಮೀಣ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.ಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್ ವಿಭಾಗ, 5ನೇ ಕ್ರಾಸ್, ಉದ್ಯಮಬಾಗ, ಬೆಳಗಾವಿ-590008 ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಖಾಗ್ರಾ), ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್ ವಿಭಾಗ, ಬೆಳಗಾವಿ ಕಚೇರಿಯನ್ನು ಸಂಪರ್ಕಿಸಬಹುದು. ಬೆಳಗಾವಿ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು 6362546707 ಹಾಗೂ ಅಥಣಿ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು 8310828195 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಧರ್ಮದ ಆಧಾರದ ಮೇಲೆ ಯಾವುದೇ ದಾಖಲೆಗಳಿಲ್ಲ – ಹಿಂದೂಗಳು ನಾಪತ್ತೆ ಎಂಬ ಯೋಗಿ ಹೇಳಿಕೆಗೆ ಯುಪಿ ಸಿಇಒ ಕೌಂಟರ್‌

Spread the loveಲಕ್ನೋ: ರಾಜ್ಯ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನ (Hindu Voters) ಹೊರಗಿಡಲಾಗಿದೆ ಎಂಬ ಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ