Breaking News

ನೆಲಮಂಗಲದಲ್ಲಿ ಮತ್ತೆ ಚಿರತೆ ಕಾಟ – ಮನೆ ಮುಂದೆ ಕಟ್ಟಿಹಾಕಿದ್ದ ಸಾಕು ನಾಯಿ ಮೇಲೆ ದಾಳಿ

Spread the love

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ಮತ್ತೆ ಚಿರತೆ  ಕಾಟ ಶುರುವಾಗಿದ್ದು, ಒಂಟಿ ಚಿರತೆಯ ದಾಳಿಗೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ನೆಲಮಂಗಲ  ತಾಲೂಕಿನ ಲಕ್ಕೇನಹಳ್ಳಿಯಲ್ಲಿ ರಾತ್ರಿ 8:15ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯ ಮುಂದೆ ಕಟ್ಟಿ ಹಾಕಿದ್ದ ಸಾಕು ನಾಯಿಯ ಮೇಲೆ ಏಕಾಏಕಿ ದಾಳಿ ಮಾಡಿದ ಚಿರತೆ ನಾಯಿಯನ್ನು ಕೊಂದು ರಕ್ತ ಹೀರಿದೆ ಎನ್ನಲಾಗಿದೆ.

ಚಿರತೆಯ ಈ ಭಯಾನಕ ದಾಳಿಯ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಒಂಟಿ ಚಿರತೆಯ ಹಾವಳಿಯಿಂದ ಲಕ್ಕೇನಹಳ್ಳಿ ಗ್ರಾಮದ ಜನರು ಭಯಭೀತರಾಗಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರಬರಲು ಕೂಡ ಗ್ರಾಮಸ್ಥರು ಹಿಂದೇಟು ಹಾಕುವಂತಾಗಿದೆ. ಚಿರತೆ ಸಂಚಾರದ ಹಿನ್ನೆಲೆ ಸ್ಥಳೀಯರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಚಿರತೆಯ ಭಯದಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಾಚರಣೆ ನಡೆಸಿ, ಚಿರತೆಯನ್ನು ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಶಾರ್ಟ್ ಸರ್ಕ್ಯೂಟ್‌ನಿಂದ ಆಟೋಮೊಬೈಲ್ ಗ್ಯಾರೇಜ್‌ಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Spread the loveಕಲಬುರಗಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಆಟೋಮೊಬೈಲ್ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ಜಿಲ್ಲೆಯ  ಅಫಜಲಪುರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ