Breaking News

ಜಿಬಿಎ ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ!

Spread the love

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರ  ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. 2026ರ ಡಿಸೆಂಬರ್ ಒಳಗೆ ಚುನಾವಣೆ ನಡೆಸುವ ಬದಲಿಗೆ 2027ರ ಜನವರಿ 31ರ ಒಳಗೆ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಮನವಿ ಮಾಡಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಗೆ ಬೆಂಬಲ ಸೂಚಿಸಿರುವ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್‌ಗೆ (Supreme Court) ಪ್ರತ್ಯೇಕ ಅರ್ಜಿ ಸಲ್ಲಿಸಿದೆ. ಅಲ್ಲದೆ, ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆ ನಡೆಸಲು ಹಳೆಯ ಮತದಾರರ ಪಟ್ಟಿಯನ್ನೇ ಬಳಸಲು ಅನುಮತಿ ನೀಡುವಂತೆ ಕೋರಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಿಂದಾಗಿ ಬೆಂಗಳೂರಿನಲ್ಲಿ 43 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳು ಕಡಿತಗೊಂಡಿರುವುದನ್ನು ಸರ್ಕಾರ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ. ಹೊಸದಾಗಿ ವಾರ್ಡ್‌ವಾರು ಮತದಾರರ ಪಟ್ಟಿಯನ್ನ ಸಿದ್ಧಪಡಿಸಲು ಕನಿಷ್ಠ 2 ತಿಂಗಳ ಕಾಲಾವಕಾಶ ಅಗತ್ಯವಿದೆ ಎಂದು ತಿಳಿಸಿದೆ. ಈ ಹಿಂದೆ ಸಿದ್ಧಪಡಿಸಲಾಗಿದ್ದ ಮತದಾರರ ಪಟ್ಟಿಯಲ್ಲಿ 88.95 ಲಕ್ಷ ಮತದಾರರ ಹೆಸರುಗಳಿದ್ದು, ಅದೇ ಪಟ್ಟಿಯನ್ನು ಬಳಸಿಕೊಂಡು ಚುನಾವಣೆ ನಡೆಸಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಇದೇ ವೇಳೆ, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯುವಂತೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.


Spread the love

About Laxminews 24x7

Check Also

ಶಾರ್ಟ್ ಸರ್ಕ್ಯೂಟ್‌ನಿಂದ ಆಟೋಮೊಬೈಲ್ ಗ್ಯಾರೇಜ್‌ಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Spread the loveಕಲಬುರಗಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಆಟೋಮೊಬೈಲ್ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ಜಿಲ್ಲೆಯ  ಅಫಜಲಪುರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ