Breaking News

ದೆಹಲಿ ಅಂಗಳದಲ್ಲಿ ಜಮೀರ್ ಫುಲ್ ಆ್ಯಕ್ಟಿವ್; ಪುಸ್ತಕ ನೀಡುವ ನೆಪದಲ್ಲಿ ಹೈಕಮಾಂಡ್ ವರಿಷ್ಠರ ಭೇಟಿ

Spread the love

ನವದೆಹಲಿ: ದಾವಣಗೆರೆ ಉಪಚುನಾವಣೆ  ಸಮಯದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್  ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿ (Congress) ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿ ಅವರ ಇಮೇಜ್‌ಗೆ ದೊಡ್ಡ ಡ್ಯಾಮೇಜ್ ತಂದಿತ್ತು. ಇದಾದ ಮೇಲೆ ದೆಹಲಿಯಿಂದ  ಅಂತರ ಕಾಯ್ದುಕೊಂಡಿದ್ದ ಜಮೀರ್ ಮತ್ತೆ ಸಕ್ರೀಯರಾಗಿದ್ದಾರೆ.

ಸಚಿವ ಜಮೀರ್ ಅಹ್ಮದ್ ಖಾನ್ ಮತ್ತೆ ಈಗ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುವ ಮೂಲಕ ವರಿಷ್ಠರ ವಿಶ್ವಾಸ ಗಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಸೋನಿಯಾ ಗಾಂಧಿ ಅವರ ಆತ್ಮಕಥೆಯ ಪುಸ್ತಕವನ್ನು ನೀಡುವ ನೆಪದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿರುವ ಜಮೀರ್ ಅಹ್ಮದ್ ಖಾನ್, ನಾಯಕರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. ಸೋಮವಾರ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಸರಣಿ ಭೇಟಿಗಳ ಮೂಲಕ ಪಕ್ಷದ ವರಿಷ್ಠರೊಂದಿಗೆ ಉತ್ತಮ ಬಾಂಧವ್ಯ ಮುಂದುವರಿಸುವ ಪ್ರಯತ್ನವನ್ನು ಜಮೀರ್ ಮಾಡುತ್ತಿದ್ದಾರೆ.

ಆಡಿಯೋ ವಿವಾದದ ಬಳಿಕ ವರಿಷ್ಠರ ವಿಶ್ವಾಸವನ್ನು ಮರಳಿ ಗಳಿಸುವ ಉದ್ದೇಶದಿಂದಲೇ ಈ ಭೇಟಿಗಳು ನಡೆಯುತ್ತಿವೆಯೇ ಎಂಬ ಚರ್ಚೆಯೂ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದ್ದು, ಮತ್ತೆ ಅಲ್ಪಸಂಖ್ಯಾತರ ರಾಜಕೀಯದಲ್ಲಿ ಮುನ್ನಲೆಗೆ ಬರಲು ತಂತ್ರಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Spread the loveಬಾಗಲಕೋಟೆ: ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಹಾಸನ, ಚಿತ್ರದುರ್ಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ