Breaking News

ಕೇಂದ್ರದಿಂದ 2,186.20 ಕೋಟಿ ಅನುದಾನ ಬಾಕಿ – ಸುಪ್ರೀಂ ನಲ್ಲಿ SLP ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ

Spread the love

ಬೆಂಗಳೂರು: ರಾಜ್ಯದ ಗ್ರಾಮಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ 2,186.20 ಕೋಟಿ ರೂ. ಅನುದಾನವನ್ನ ಕ್ಷುಲ್ಲಕ ಕಾರಣ ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ತೆರವು ಅರ್ಜಿ (ಎಸ್.ಎಲ್.ಪಿ.) ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದರು.

ತಮ್ಮ ಕಚೇರಿಯಲ್ಲಿಂದು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರೊಂದಿಗೆ ಸಮಾಲೋಚಿಸಿದ ಸಚಿವರು, ರಾಜ್ಯ ಸರ್ಕಾರ ಹಲವು ಮನವಿ ಮಾಡಿದರೂ, ಅಗತ್ಯ ದಾಖಲಾತಿ ಸಲ್ಲಿಸಿದರೂ 2025-26ನೇ ಸಾಲಿನ 2186.20 ಕೋಟಿ ರೂ. ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದು ಮಾತ್ರ ಉಳಿದಿರುವ ಏಕೈಕ ಮಾರ್ಗ ಎಂದರು.

ರಾಜ್ಯದಲ್ಲಿ ಈ ಬಾರಿ ಎಲ್ ನಿನೋ ಪ್ರಭಾವದಿಂದ ಮಳೆಯ ಕೊರತೆಯಾಗಿದ್ದು ಬರಪರಿಸ್ಥಿತಿ ತಲೆದೋರಿದೆ. ಪಂಚಾಯಿತಿಗಳಲ್ಲಿ ದುರಸ್ತಿಗೂ ಹಣವಿಲ್ಲ. ಕೇಂದ್ರ ಸರ್ಕಾರ ಈ ರೀತಿ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಹಣವನ್ನೇ ತಡೆ ಹಿಡಿದಿರುವುದು ಸರಿಯಲ್ಲ. ಹೀಗಾಗಿ ವಿಳಂಬ ಮಾಡದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಎಂದು ತಿಳಿಸಿದರು.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಈ ಹಿಂದೆ ಕೂಡ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡಬೇಕಾದ ಹಣ ಬಿಡುಗಡೆ ಮಾಡಿರಲಿಲ್ಲ. ಆಗ ನ್ಯಾಯಾಲಯದ ಮೊರೆ ಹೋಗಿದ್ದೇವು. ಈ ಪ್ರಕರಣದಲ್ಲೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿಯ ಕುರಿತಂತೆ ನ್ಯಾಯಾಲಯದಲ್ಲಿರುವ ಪ್ರಕರಣ ಹಾಗೂ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಗಳಲ್ಲಿ ಬಾಕಿ ಇರುವ ಇಲಾಖೆಯ ಪ್ರಕರಣಗಳ ಕುರಿತಂತೆಯೂ ಈಶ್ವರ ಬಿ ಖಂಡ್ರೆ ಶಶಿಕಿರಣ್ ಶೆಟ್ಟಿ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕಾರ್ಯದರ್ಶಿ ಡಿ. ರಂದೀಪ್, ಕಾನೂನು ಇಲಾಖೆ ಕಾರ್ಯದರ್ಶಿ ಗೋಪಾಲಕೃಷ್ಣ ರಾಯ್, ಇಲಾಖೆಯ ಆಯುಕ್ತರಾದ ಫೌಜಿಯಾ ತರುನ್ನುಂ ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ