Breaking News

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Spread the love

ಬಾಗಲಕೋಟೆ: ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಹಾಸನ, ಚಿತ್ರದುರ್ಗ, ಬಾಗಲಕೋಟೆ ಸೇರಿದಂತೆ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭ್ರಷ್ಟ ಅಧಿಕಾರಿಗಳಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ದಾಳಿ (Raid) ನಡೆಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆಗೆ ಮುಂದಾಗಿದ್ದಾರೆ.

ಎಲ್ಲೆಲ್ಲಿ ದಾಳಿ?

ಚಿತ್ರದುರ್ಗ
ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್‌ಪೆಕ್ಟರ್ ವೆಂಕಟೇಶ್ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು.

ವಿದ್ಯಾನಗರದಲ್ಲಿರುವ ವೆಂಕಟೇಶ್ ಅವರ ನಿವಾಸ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾಳಿ ಹಾಗೂ ಪರಿಶೀಲನೆ ನಡೆದಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಬಾಗಲಕೋಟೆ
ಇನ್ನೂ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮಖಂಡಿ ತಾಲೂಕು ಪಂಚಾಯತ್‌ನ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಸಂಜು ಹಿಪ್ಪರಗಿ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಮೈಗೂರು ರಸ್ತೆ ಹಾಗೂ ವಿಜಯನಗರ ಬಡಾವಣೆಯಲ್ಲಿರುವ ಸಂಜು ಹಿಪ್ಪರಗಿ ಅವರ ಎರಡು ಮನೆಗಳ ಮೇಲೆ ದಾಳಿ ನಡೆದಿದೆ. ಮೂಲತಃ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದವರಾದ ಸಂಜು ಹಿಪ್ಪರಗಿ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ.

ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಮಹಾಲಿಂಗ್ ನಂದಗಾವಿ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಸುಮಾರು ಏಳು ಮಂದಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ವಿಜಯನಗರ ಬಡಾವಣೆಯಲ್ಲಿರುವ ನಿವಾಸದಲ್ಲಿಯೂ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಹಾಸನ
ಹಾಸನ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸಕಲೇಶಪುರ ವಲಯದ ಅರಣ್ಯಾಧಿಕಾರಿ (RFO) ಹೇಮಂತ್‌ಕುಮಾರ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಹೇಮಂತ್‌ಕುಮಾರ್ ಅವರ ನಿವಾಸ, ಸಕಲೇಶಪುರದಲ್ಲಿರುವ ಬಾಡಿಗೆ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇದಲ್ಲದೆ, ಆಲೂರು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಹೇಮಂತ್‌ಕುಮಾರ್ ಅವರ ಮಾವನ ಮನೆ ಹಾಗೂ ಕುವೆಂಪು ನಗರದಲ್ಲಿರುವ ಅವರ ಆಪ್ತ ಗುತ್ತಿಗೆದಾರ ಹರೀಶ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಹಾಗೂ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ, ಗವಿರಾಜು ಮತ್ತು ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಐದು ಸ್ಥಳಗಳಲ್ಲಿ ಅಧಿಕಾರಿಗಳು ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ