Breaking News

ಪ್ರದೀಪ್ ಈಶ್ವರ್ ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನ – ತಂದೆಯಾದ ಸಂಭ್ರಮದಲ್ಲಿ ಶಾಸಕ

Spread the love

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನವಾಗಿದೆ.

ತಂದೆಯಾಗಿರುವ ಸಂತಸದ ವಿಚಾರವನ್ನು ಶಾಸಕ ಪ್ರದೀಪ್ ಈಶ್ವರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ನವಜಾತ ಹೆಣ್ಣು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ಶಾಸಕರು, ತಮ್ಮ ಜೀವನದ ಈ ವಿಶೇಷ ಕ್ಷಣದ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಇನ್ನು ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ತಂದೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಯನ ಹಾಗೂ ಪ್ರದೀಪ್ ಈಶ್ವರ್ ದಂಪತಿಗೆ ಮಹಾಲಕ್ಷ್ಮಿಯ ಆಗಮನವಾಗಿರುವುದಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ವ್ಯಕ್ತವಾಗುತ್ತಿವೆ.


Spread the love

About Laxminews 24x7

Check Also

ಪ್ರದೀಪ್ ಈಶ್ವರ್ ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನ – ತಂದೆಯಾದ ಸಂಭ್ರಮದಲ್ಲಿ ಶಾಸಕ

Spread the loveಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ