Breaking News

ಜೂಜಾಟದ ಅಡ್ಡೆ: ಬಹುಭಾಷಾ ನಟನನ್ನು ಪೊಲೀಸರು ಬಂಧಿಸಿದ್ದಾರೆ

Spread the love

ಲಾಕ್ಡೌನ್ ಸಂದರ್ಭದಲ್ಲಿ ತನ್ನ ಅಪಾರ್ಟ್ಮೆಂಟ್ ಅನ್ನು ಜೂಜಾಟದ ಅಡ್ಡೆಯನ್ನಾಗಿ ಮಾಡಿಕೊಂಡಿದ್ದ ಬಹುಭಾಷಾ ನಟನನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಜೂಜಾಟಕ್ಕೆ ಬಳಸಿದ್ದ ಲಕ್ಷಾಂತರ ರೂಪಾಯಿ ವಶಪಡಿಸಿಕೊಂಡಿದ್ದಾರೆ.

ಕನ್ನಡ ಸೇರಿದಂತೆ ತಮಿಳು, ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ ಶ್ಯಾಮ್ ಬಂಧಿತನಾಗಿದ್ದು, ಈತನೊಂದಿಗೆ ಇದ್ದ ಇತರೆ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ಯಾಮ್, ಸ್ಯಾಂಡಲ್ವುಡ್ ನ ‘ತನನಂ’, ರಾಕಿಂಗ್ ಸ್ಟಾರ್ ಯಶ್ ನಾಯಕ ನಟರಾಗಿರುವ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರಗಳಲ್ಲಿ ಅಭಿನಯಿಸಿದ್ದರು.

ಶ್ಯಾಮ್ ಮತ್ತಾತನ ತಂಡ ಚೆನ್ನೈನ ನುಂಗಂಬಾಕಂನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಜೂಜಾಟ ಆಡುತ್ತಿದ್ದರೆನ್ನಲಾಗಿದ್ದು,‌ ಲಾಕ್‌ ಡೌನ್‌ ಸಂದರ್ಭದಲ್ಲಿ ಇದು ರಾತ್ರಿ 11 ರಿಂದ ಬೆಳಗಿನ ಜಾವ 4 ಗಂಟೆಯವರೆಗೂ ನಡೆಯುತ್ತಿತ್ತೆಂದು ಹೇಳಲಾಗಿದೆ.ಈ ಜೂಜಾಟದಲ್ಲಿ ದೊಡ್ಡ ಮೊತ್ತವನ್ನು ಕಳೆದುಕೊಂಡಿದ್ದ ಮತ್ತೊಬ್ಬ ನಟ ಪೊಲೀಸರಿಗೆ ನೀಡಿದ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿ ಶ್ಯಾಮ್ ಮತ್ತಾತನ ತಂಡವನ್ನು ಬಂಧಿಸಿದ್ದಾರೆ. ಕನ್ನಡ ಚಿತ್ರರಂಗದ ಕೆಲ ನಟ-ನಟಿಯರು ಸಹ ಈ ಜೂಜಾಟದಲ್ಲಿ ಭಾಗಿಯಾಗಿದ್ದರೆಂದು ಹೇಳಲಾಗಿದ್ದು, ಚೆನ್ನೈ ಪೊಲೀಸರ ವಿಚಾರಣೆ ವೇಳೆ ಬಹಿರಂಗವಾಗಲಿದೆ. ಶ್ಯಾಮ್ ಮತ್ತಾತನ ಸಹಚರರನ್ನು ಈಗ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.


Spread the love

About Laxminews 24x7

Check Also

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Spread the loveಟೆಹ್ರಾನ್‌: ಅಮೆರಿಕ-ಇಸ್ರೇಲ್‌ ಹಾಗೂ ಗಲ್ಫ್‌ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ