Breaking News

ಗೋಕಾಕ:ಪಂಚಾಯತ್ ಪಿಡಿಒ ಮತ್ತು ಕಾರ್ಯದರ್ಶಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ : ಶಾಸಕ ರಮೇಶ ಜಾರಕಿಹೊಳಿ

Spread the love

ಗೋಕಾಕ : ಪಂಚಾಯತ್ ಪಿಡಿಒ ಮತ್ತು ಕಾರ್ಯದರ್ಶಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಬುಧವಾರದಂದು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕು ಪಂಚಾಯತ್ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಕುಡಿಯುವ ನೀರಿನ ಪ್ರಗತಿ ಪರಶೀಲಾನಾ ಸಭೆಯ ಅಧ್ಯಕ್ಷ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇ-ಸ್ವತ್ತು ಕಾರ್ಯವನ್ನು ಎಲ್ಲಾ ಪಂಚಾಯಿತಿ ಅವರು ಸರಿಯಾಗಿ ಅನುಷ್ಠಾನ ಮಾಡಬೇಕು. ಪಂಚಾಯಿತಿ ಮಟ್ಟದಲ್ಲಿ ಸರಿಯಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು.ಪಂಚಾಯತ್ ಪಿಡಿಒಗಳು ಸ್ಥಳೀಯ ಮಟ್ಟದಲ್ಲಿ ಸಾರ್ವಜನಿಕರಿಗೆ ಕಛೇರಿಯಲ್ಲಿ ಪ್ರತಿನಿತ್ಯ ಬೇಟಿಯಾಗಿ ಅವರ ಸಮಸ್ಯೆಗಳಿಗೆ ಸ್ವಂದಿಸಬೇಕು. ಸಾರ್ವಜನಿಕರಿಗೆ ಪಿಡಿಒಗಳು ಸರಿಯಾಗಿ ಸಿಗದೆ ಇದ್ದರೆ ಅಂತಹ ಪಿಡಿಒ ಮತ್ತು ಕಾರ್ಯದರ್ಶಿಗಳನ್ನು ಅಮಾನತು ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪರವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಮಾತ್ರ ಗೋಕಾಕ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ವಿದೆ. ಯಾರೂ ಊಡಾಪೆತನದಿಂದ ಕೆಲಸ ಮಾಡುತ್ತಾರೆ ಅವರು ಬೇರೆ ಕಡೆ ವರ್ಗಾವಣೆ ಮಾಡಿಕೊಂಡು ಹೋಗಬಹುದು ಎಂದು ಎಚ್ಚರಿಕೆ ನೀಡಿದ ಅವರು ರಾಜ್ಯದಲ್ಲಿ ಬರಗಾಲ ಇರುವ ಕಾರಣ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಂಭವ ವಿದೆ. ಯಾರಿಗೂ ತೊಂದರೆ ಆಗದಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲಾ ಪಿಡಿಒ ಮತ್ತು ಕಾರ್ಯದರ್ಶಿಗಳನ್ನು ವಿಶ್ವಾಸಕ್ಕೆ ತಗೆದುಕೊಂಡು ಕೆಲಸ ಮಾಡಬೇಕು. ಯಾವದೆ ಗ್ರಾಮಕ್ಕೆ ನೀರಿನ ತೊಂದರೆ ಉಂಟಾದರೆ ಅಂತಹ ಗ್ರಾಮಗಳಲ್ಲಿ ಜನಸಂಖ್ಯೆ ಆಧಾರದ ಮೇಲೆ ಒಂದು ಅಥಾವ ಎರಡು ನೀರಿನ ಟ್ಯಾಂಕರ್ ಗಳನ್ನು ಪೂರೈಸಿ ಅವರಿಗೆ ತೊಂದರೆ ಆಗದಂತೆ ನೋಡಿ ಕೊಳ್ಳಬೇಕು ಎಂದು ಶಾಸಕ ರಮೇಶ್ ಜಾರಕಿಹೊಳಿ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಡಾ.ಮೋಹನ ಭಸ್ಮೆ, ತಾಪಂ ಅಧಿಕಾರಿ ಪರಶುರಾಮ ಗಸ್ತೆ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಗೋಕಾಕ:ಪಂಚಾಯತ್ ಪಿಡಿಒ ಮತ್ತು ಕಾರ್ಯದರ್ಶಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ : ಶಾಸಕ ರಮೇಶ ಜಾರಕಿಹೊಳಿ

Spread the love ಗೋಕಾಕ : ಪಂಚಾಯತ್ ಪಿಡಿಒ ಮತ್ತು ಕಾರ್ಯದರ್ಶಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ರಮೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ