Breaking News

`ಬಸವ ಮಂಟಪ’ ಕೃತಿ ವಿವಾದ – ಲೇಖಕ ರವಿ ಹಂಜ್, ಪ್ರಕಾಶಕರ ವಿರುದ್ಧ FIR

Spread the love

ಬೆಂಗಳೂರು: ರಾಜ್ಯದಲ್ಲಿ ಲೇಖಕ ರವಿ ಹಂಜ್ ಅವರ ಬಸವ  ಮಂಟಪ ಕೃತಿ ಸಂಬಂಧಿಸಿದಂತೆ ಆಕ್ರೋಶ ಭುಗಿಲೆದ್ದಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ  ಲೇಖಕ ರವಿ ಹಂಜ್ ಹಾಗೂ ಪ್ರಕಾಶಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಸವ ಸಮಿತಿ ಅಧ್ಯಕ್ಷ ಅರವಿಂದ್ ಜತ್ತಿ ಅವರು ದೂರು ನೀಡಿದ್ದು, ಬಸವಣ್ಣನರನ್ನ ಕೊಲೆಗಾರ & ಕಳ್ಳ ಎಂಬಂತೆ ಬಿಂಬಿಸಿದ್ದಾರೆ. ಲಿಂಗಾಯತ ಪದ ತಿರುಚಿ ಲಿಂಗಾಹತ ಎಂದು ಹೇಳಿದ್ದಾರೆ. ಜೊತೆಗೆ ಲಿಂಗಾಯತ & ಕೆಲ ಪೂಜ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಮೂಲಕ ಶಾಂತಿ ಕದಡುವ ಕೆಲಸ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ದೂರಿನನ್ವಯ ಲೇಖಕ ರವಿ ಹಂಜ್  ಹಾಗೂ ಪ್ರಕಾಶಕರ ವಿರುದ್ಧ ಸಾರ್ವಜನಿಕ ಶಾಂತಿ ಭಂಗ, ದ್ವೇಷ ಭಾಷಣ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪದ ಮೇಲೆ ಬಿಎನ್‌ಎಸ್ ಸೆಕ್ಷನ್ 192, 196(1), 353(2), 299ರಡಿ ಎಫ್‌ಐಆರ್ ದಾಖಲಾಗಿದೆ.


Spread the love

About Laxminews 24x7

Check Also

ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯೊಳಗೇ ಹೋರಾಟ: ರಾಹುಲ್ ಗಾಂಧಿ

Spread the loveನವದೆಹಲಿ: ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಬದಲಾಗಿ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕವೇ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ