ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಮಾಡಲಾಗ್ತಿದೆ. ಈಗಾಗಲೇ ಸಕಲ ಸಿದ್ಧತೆ ನಡೆದಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಒಂದೇ ದಿನ ಎರಡು ಕಾರ್ಯಕ್ರಮಗಳು ನಡೆಯಲಿದೆ. ಇದು ಸರ್ಕಾರ ನಡೆಸುತ್ತಿರುವ ಕಾರ್ಯಕ್ರಮ, ದಲಿತ ಸಮುದಾಯದ ಮುಖಂಡರು ಕಳೆದ ಒಂದು ವರ್ಷದಿಂದಲೂ ಸಂವಿಧಾನ ದಿನಾಚರಣೆ ಮಾಡಿಕೊಂಡು ಬಂದಿದ್ದಾರೆ. ಅವ್ರು ಕೂಡ ಸಂಜೆ ಸಂವಿಧಾನ ಧ್ವನಿ, ಜನರ ದ್ವನಿ ಕಾರ್ಯಕ್ರಮ ಮಾಡ್ತಾರೆ ಎಂದಿದ್ದಾರೆ.
ಇನ್ನು, ಎರಡು ಕಾರ್ಯಕ್ರಮಗಳಿಗೂ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಇಬ್ಬರು ಭಾಗಿಯಾಗುತ್ತಾರೆ. ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಚಿವ ನರೇಂದ್ರ ಸ್ವಾಮಿ ಕೂಡ ಸರ್ಕಾರದ ಕಾರ್ಯಕ್ರಮಕ್ಕೆ ರಾಜಕೀಯ ಅರ್ಥ ಕಲ್ಪಿಸೋದು ಬೇಡ. ಎಲ್ಲರೂ ಕೂಡ ಒಟ್ಟಾಗಿ ಜವಾಬ್ದಾರಿಯುತವಾಗಿ ಕಾರ್ಯಕ್ರಮ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.
Laxmi News 24×7