Breaking News

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ 15 ವರ್ಷದ ಗಂಡಾನೆ ಸಾವು

Spread the love

ಚಾಮರಾಜನಗರ: ಬಂಡೀಪುರ  ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ ಸುಮಾರು 15 ವರ್ಷ ವಯಸ್ಸಿನ ಗಂಡಾನೆಯೊಂದು ಮೃತಪಟ್ಟಿದೆ.

ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಆನೆಯ ಶವ ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪಶುವೈದ್ಯರು ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಹೊಟ್ಟೆನೋವಿನಿಂದ ಆನೆ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ.

ಈವರೆಗೂ ಆನೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ಸದ್ಯ ನಿಖರ ಕಾರಣ ತಿಳಿಯಲು ಅಗತ್ಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಮಾಜ ಒಡೆದು ಸಮಾಜದ ನಾಯಕನಾಗಲು, ಸಿಎಂ ಆಗಲು ಮಾತನಾಡಿದ್ದಾರೆ – ಎಂ.ಬಿ ಪಾಟೀಲ್ ವಿರುದ್ಧ ಶಂಕರ್ ಬಿದರಿ ಕಿಡಿ

Spread the loveಬೆಂಗಳೂರು: ಸಮಾಜ ಒಡೆದು ಸಮಾಜದ ನಾಯಕನಾಗಲು, ಸಿಎಂ ಆಗಲು ಮಾತನಾಡಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ