ಬೆಂಗಳೂರು: ಗಡಿ ಸಂಘರ್ಷದ ಬೆನ್ನಲ್ಲೇ ಚೀನಾದ ಅನೇಕ ಆಯಪ್‌ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು, ಈಗ ಆ ರಾಷ್ಟ್ರಕ್ಕೆ ಆರ್ಥಿಕವಾಗಿ ಮತ್ತೊಂದು ಪೆಟ್ಟು ನೀಡಲು ಮುಂದಾಗಿದೆ.
ಸರ್ಕಾರವು ತನ್ನ ನೆರೆಯ ರಾಷ್ಟ್ರಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧ ಹೇರಿದೆ. ಭಾರತದ ಜೊತೆ ಗಡಿ ಹಂಚಿಕೊಂಡಿರುವ ರಾಷ್ಟ್ರಗಳ ಕಂಪನಿಗಳು ಕೈಗಾರಿಕಾ ಇಲಾಖೆಯಲ್ಲಿ ಹೆಸರು ನೋಂದಾಯಿ ಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮಾಡಿಸಿಕೊಳ್ಳದ ಕಂಪನಿಗಳು ಸರ್ಕಾರಿ ಬಿಡ್ ಸಲ್ಲಿಸುವ ಅವಕಾಶ ಕಳೆದುಕೊಳ್ಳಲಿವೆ. ಸರಕು ಮತ್ತು ಸೇವಾ ವಲಯದಲ್ಲಿ ಚೀನಾ ಅವಲಂಬನೆಯನ್ನು ತಪ್ಪಿಸುವ ಉದ್ದೇಶ ದಿಂದ ಕೇಂದ್ರ ಸರ್ಕಾರವು ಇಂತಹ ಮಹತ್ವದ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.