Breaking News

ಉಡಾನ್ 6.0 ಯೋಜನೆಗೆ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆ: ಬಿವೈಆರ್

Spread the love

ಶಿವಮೊಗ್ಗ: ಕೇಂದ್ರ ಸರ್ಕಾರದ ಉಡಾನ್ 6.0 ಯೋಜನೆಯ ಟೆಂಡರ್‌ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು  ಸೇರ್ಪಡೆ ಮಾಡಲಾಗಿದೆ. ಶೀಘ್ರವೇ ವಿಮಾನ ಸೇವೆ ಪುನಾರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಉಡಾನ್ 6.0 ಯೋಜನೆ ಅಡಿ ಶಿವಮೊಗ್ಗ ಏರ್‌ಪೋರ್ಟ್ ಕೂಡ ಟೆಂಡರ್‌ಗೆ ಪರಿಗಣನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಶ್ರಮದಿಂದ ಈ ಕೆಲಸ ಆಗಿದೆ ಎಂದು ಮಾಹಿತಿ ನೀಡಿದರು.

ಡಿ.31 ರವರೆಗೆ ಏರ್‌ಲೈನ್ಸ್ ಸಂಸ್ಥೆಗಳು ಭಾಗವಹಿಸಲು ಅವಕಾಶವಿದೆ. ಈ ಬಾರಿ ನಿರ್ದಿಷ್ಟ ಮಾರ್ಗಗಳ ನಿರ್ಬಂಧವಿಲ್ಲ. ವಿಮಾನಯಾನ ಸಂಸ್ಥೆಗಳು ತಮ್ಮ ಆಯ್ಕೆಯ ಯಾವುದೇ ಮಾರ್ಗದಲ್ಲಿ ಶಿವಮೊಗ್ಗದಿಂದ ಸೇವೆ ಆರಂಭಿಸಬಹುದು. ಇದಕ್ಕೆ ಕೇಂದ್ರ ಸರ್ಕಾರವೇ ಸಬ್ಸಿಡಿ ನೀಡಲಿದೆ. ಈಗಾಗಲೇ ಮೂರು ಪ್ರಮುಖ ಏರ್‌ಲೈನ್ಸ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.

ಉಡಾನ್ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ವಿಮಾನ ಸೇವೆ ಆರಂಭವಾಗಲು ಫೆಬ್ರವರಿ ಅಥವಾ ಮಾರ್ಚ್‌ವರೆಗೆ ಸಮಯ ಹಿಡಿಯಲಿದೆ. ಈ ಮೂರ್ನಾಲ್ಕು ತಿಂಗಳ ಅವಧಿಗೆ ಶಿವಮೊಗ್ಗ -ಬೆಂಗಳೂರು ಹಾಗೂ ಶಿವಮೊಗ್ಗ – ಹೈದರಾಬಾದ್ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ವಿಮಾನ ಸೇವೆ ಒದಗಿಸಲು ರಾಜ್ಯ ಸರ್ಕಾರ ತನ್ನ ವಯಾಬಲಿಟಿ ಗ್ಯಾಪ್ ಫಂಡ್ (ವಿಜಿಎಫ್) ಯೋಜನೆಯಡಿ ನೆರವು ನೀಡಬೇಕು ಎಂದು ಮನವಿ ಮಾಡಿದರು.

ಈ ಹಿಂದೆ ಉಡಾನ್ ಒಪ್ಪಂದ ಮುಗಿದ ಬಳಿಕ ಕಮರ್ಷಿಯಲ್ ಬ್ರೇಕ್ ನಿಯಮ ಇರುತ್ತಿತ್ತು. ಆದರೆ, ಈ ಬಾರಿ ಅಂತಹ ಯಾವುದೇ ತೊಡಕಿಲ್ಲ. ಒಮ್ಮೆ ಹೊಸ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡರೆ ಮುಂದಿನ ಐದು ವರ್ಷಗಳ ಕಾಲ ವಿಮಾನ ಸೇವೆ ನಿರಂತರವಾಗಿ ಇರಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಅಪ್ರಾಪ್ತೆ ಮದುವೆಯಾಗಿ ಮೂರು ಮಕ್ಕಳ ತಂದೆಯಾಗಿದ್ದವ ಜೈಲಿಗೆ

Spread the loveಕೋಲಾರ: ಅಪ್ರಾಪ್ತೆಯನ್ನು ಮದುವೆಯಾಗಿ 3 ಮಕ್ಕಳ ತಂದೆಯಾಗಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ  ಜಿಲ್ಲೆ ಕೆಜಿಎಫ್ ತಾಲ್ಲೂಕು ಬೇತಮಂಗಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ