Breaking News

ಕೊಪ್ಪಳ: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು

Spread the love

ಕೊಪ್ಪಳ: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್‌ ಪೇದೆ ಸಾವಿಗೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ.

ಮೃತ ಮಹಿಳಾ ಪೊಲೀಸ್ ಪೇದೆ ರೇಖಾ ವೀರೇಶಕುಮಾರ (33) ಮೃತ ಪೇದೆ. ಇವರು ಹುನುಗುಂದ ತಾಲೂಕಿನ ಇದ್ದಲಗಿ ಗ್ರಾಮದ ನಿವಾಸಿ.

2018ನೇ ಬ್ಯಾಚ್‌ನ ಮಹಿಳಾ ಪೊಲೀಸ್ ಪೇದೆಯಾಗಿರುವ ರೇಖಾ ಅವರು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.

ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗರ್ಭಿಣಿ ಪೊಲೀಸ್ ಪೇದೆಯ ಸಾವಿನಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ.


Spread the love

About Laxminews 24x7

Check Also

ಗ್ಯಾರಂಟಿ ಸಮಾವೇಶ ಮುಗಿಸಿ ಮರಳುತ್ತಿದ್ದ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – ಹಲವರಿಗೆ ಗಾಯ

Spread the loveಉಡುಪಿ: ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ