Breaking News

ವಿವಾಹಿತೆ ಜೊತೆ ಸಂಬಂಧ – ಹೆತ್ತ ತಾಯಿಯಿಂದಲೇ ಮಗನ ಭೀಕರ ಕೊಲೆ

Spread the love

ತುಮಕೂರು: ಹೆತ್ತ ತಾಯಿಯೇ ತನ್ನ ಸ್ವಂತ ಮಗನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ತುಮಕೂರು ತಾಲೂಕಿನ ಜಕ್ಕೇನಹಳ್ಳಿಯಲ್ಲಿ ನಡೆದಿದೆ.

ಮಗನ ಸಾವಿನ ನಂತರ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ತಾಯಿಯ ಕಳ್ಳಾಟವನ್ನು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಬಯಲು ಮಾಡಿದೆ.

ಮೃತ ಯುವಕನನ್ನು ಮುತ್ತುರಾಜ್ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ತಾಯಿ ಶಿವಮ್ಮ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಮನೆಯ ಮುಂದೆ ಮಲಗಿದ್ದ ಮುತ್ತುರಾಜ್ ಬೆಳಿಗ್ಗೆ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಯಾರೋ ದುಷ್ಕರ್ಮಿಗಳು ತಲೆಗೆ ಹೊಡೆದು ಕೊಲೆ ಮಾಡಿರಬಹುದು ಎಂದು ಆರಂಭದಲ್ಲಿ ಶಂಕಿಸಲಾಗಿತ್ತು.

ಪ್ರಕರಣವನ್ನು ಕೈಗೆತ್ತಿಕೊಂಡ ತುಮಕೂರು ಗ್ರಾಮಾಂತರ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ನಿಜವಾದ ಸತ್ಯ ಹೊರಬಂದಿದೆ. ರಾತ್ರಿ ಮಲಗಿದ್ದ ಮಗನ ಮೇಲೆ ತಾಯಿ ಶಿವಮ್ಮ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿತ್ತು.

ಕೊಲೆಗೆ ಕಾರಣವೇನು?
ಮುತ್ತುರಾಜ್ ಊರಿನ ವಿವಾಹಿತ ಮಹಿಳೆಯೊಬ್ಬರ ಜೊತೆ ಸಂಬಂಧ ಹೊಂದಿದ್ದು, ಮಗು ಇದ್ದ ಆಕೆಯನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದರು ಎನ್ನಲಾಗಿದೆ. ಇದಕ್ಕೆ ತಾಯಿ ಶಿವಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಗ ತನ್ನ ಮಾತು ಕೇಳದೆ ಮದುವೆಗೆ ಮುಂದಾಗಿದ್ದರಿಂದ ಬೇಸತ್ತ ತಾಯಿ, ಆತನಿಗೆ ಬುದ್ಧಿ ಕಲಿಸಲು ನಿರ್ಧರಿಸಿ ರಾತ್ರಿ ಮನೆಯಲ್ಲಿದ್ದ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ. ಆದರೆ ಏಟಿನ ತೀವ್ರತೆಗೆ ಮುತ್ತುರಾಜ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಕೊಲೆ ಮಾಡಿದ ಬಳಿಕ ಏನೂ ಅರಿಯದವರಂತೆ ನಾಟಕವಾಡಿದ್ದ ಶಿವಮ್ಮ ಅವರನ್ನು ಸಿಸಿಟಿವಿ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಸಮಾವೇಶ ಮುಗಿಸಿ ಮರಳುತ್ತಿದ್ದ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – ಹಲವರಿಗೆ ಗಾಯ

Spread the loveಉಡುಪಿ: ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ