Breaking News

ಬೆಂಗಳೂರಿನ ಕಸದ ಸಮಸ್ಯೆಗೆ ಜಪಾನ್ ಮಾದರಿ ಪರಿಹಾರ – ಓಸಾಕಾ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸಿಎಂ ಭೇಟಿ

Spread the love

ಟೋಕಿಯೋ: ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ರಾಜ್ಯದ ನಗರಗಳ ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಅಧಿಕಾರಿಗಳ ನಿಯೋಗದೊಂದಿಗೆ ಜಪಾನ್‌ನ ಓಸಾಕಾ ನಗರದ ಮೈಶಿಮಾ ದ್ವೀಪದಲ್ಲಿರುವ ಅತ್ಯಾಧುನಿಕ ತ್ಯಾಜ್ಯ ದಹನ ಘಟಕಕ್ಕೆ ಭೇಟಿ ನೀಡಿ, ಕಸದಿಂದ ವಿದ್ಯುತ್ ತಯಾರಿಸುವ ಮಾದರಿಯನ್ನು ಪರಿಶೀಲಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕಸ ವಿಲೇವಾರಿ ದೊಡ್ಡ ಸವಾಲಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸಲು ಜಪಾನ್ ತಂತ್ರಜ್ಞಾನವನ್ನು ಅಧ್ಯಯನ ಮಾಡುತ್ತಿರುವ ಸಿಎಂ, ಓಸಾಕಾ ಘಟಕದ ಕಾರ್ಯವೈಖರಿಯನ್ನು ಹತ್ತಿರದಿಂದ ಗಮನಿಸಿದ್ದಾರೆ. 2001ರಿಂದ ಕಾರ್ಯನಿರ್ವಹಿಸುತ್ತಿರುವ ಈ ಘಟಕದಲ್ಲಿ ಎರಡು ದಹನಕಾರಿ ಯಂತ್ರಗಳ ಮೂಲಕ ಪ್ರತಿದಿನ ಗರಿಷ್ಠ 900 ಟನ್ ನಗರ ಘನ ತ್ಯಾಜ್ಯವನ್ನು ಸಂಸ್ಕರಿಸಿ, ಬರೋಬ್ಬರಿ 32 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಈ ಮಾದರಿಯನ್ನು ನಮ್ಮಲ್ಲೂ ಅಳವಡಿಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

ಇದೇ ಪ್ರವಾಸದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಪಾನ್‌ನ ಹೆಸರಾಂತ ‘ಶಿಂಕಾನ್ಸೆನ್’ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ. ಬುಲೆಟ್ ಟ್ರೈನ್‌ನ ವೇಗ, ಸಮಯಪಾಲನೆ, ಕಾರ್ಯಕ್ಷಮತೆ ಮತ್ತು ವಿಶ್ವ ದರ್ಜೆಯ ರೈಲು ಮೂಲಸೌಕರ್ಯವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ತಮ್ಮ ಪ್ರಯಾಣದ ಅನುಭವ ಮತ್ತು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಸಮಾವೇಶ ಮುಗಿಸಿ ಮರಳುತ್ತಿದ್ದ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – ಹಲವರಿಗೆ ಗಾಯ

Spread the loveಉಡುಪಿ: ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ