Breaking News

ಗ್ಯಾರಂಟಿ ಸಮಾವೇಶ ಮುಗಿಸಿ ಮರಳುತ್ತಿದ್ದ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – ಹಲವರಿಗೆ ಗಾಯ

Spread the love

ಉಡುಪಿ: ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಆನೆಗುಡ್ಡೆ ಗೋಪುರದ ಬಳಿ ನಡೆದಿದೆ.

ತ್ರಾಸಿಯಿಂದ ಸುಮಾರು 30 ಮಂದಿ ಪ್ರಯಾಣಿಕರನ್ನು ಕರೆದುಕೊಂಡು ಈ ಬಸ್ ಉಡುಪಿಯಲ್ಲಿ  ನಡೆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶಕ್ಕೆ ಬಂದಿತ್ತು. ಸಮಾವೇಶ ಮುಗಿದ ನಂತರ, ಊರಿಗೆ ಮರಳುವ ದಾರಿಯಲ್ಲಿ ಕುಂದಾಪುರ ಸಮೀಪದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಎಲ್ಲರೂ ಊಟ ಮುಗಿಸಿಕೊಂಡು ತ್ರಾಸಿಯತ್ತ ಹೊರಟಿದ್ದರು.
ದೇವಸ್ಥಾನದ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಬಂದು ಕುಂದಾಪುರದ ಕಡೆಗೆ ಹೋಗಲು ಚಾಲಕ ಬಸ್ಸನ್ನು ತಿರುಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಇದೇ ಸಮಯಕ್ಕೆ ಮಂಗಳೂರಿನಿಂದ ಕುಂದಾಪುರದತ್ತ ವೇಗವಾಗಿ ಬರುತ್ತಿದ್ದ ಎರಡು ಬುಲೆಟ್ ಟ್ಯಾಂಕರ್‌ಗಳ ಪೈಕಿ ಒಂದು ಟ್ಯಾಂಕರ್, ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದೆ. ಆದರೂ ನಿಯಂತ್ರಣ ತಪ್ಪಿದ ಟ್ಯಾಂಕರ್ ಬಸ್ಸಿನ ಬಲಭಾಗಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಅಪ್ಪಳಿಸಿ ನಿಂತಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅನಾಹುತ ಸಂಭವಿಸಿದರೂ ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ 30 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕುಂದಾಪುರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಸಮಾವೇಶ ಮುಗಿಸಿ ಮರಳುತ್ತಿದ್ದ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – ಹಲವರಿಗೆ ಗಾಯ

Spread the loveಉಡುಪಿ: ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ