Breaking News

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Spread the love

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯುಜಿಡಿ  ಹೆಲ್ಪರ್‌ಗಳ ಬಾಕಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದಿಂದ ಮಂಜೂರಾದ ಹುದ್ದೆಗಳ ಪೈಕಿ ಇತರೆ ವರ್ಗದ 13 ಹುದ್ದೆಗಳು, ಪರಿಶಿಷ್ಟ ಜಾತಿ (ಎ) ಪ್ರವರ್ಗದ ಒಂದು ಹುದ್ದೆ ಹಾಗೂ ಪರಿಶಿಷ್ಟ ಪಂಗಡದ ಎರಡು ಹುದ್ದೆಗಳು ಅರ್ಹ ಅಭ್ಯರ್ಥಿಗಳ ಅಲಭ್ಯತೆಯಿಂದ ಬಾಕಿ ಉಳಿದಿವೆ.

ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಈ ಹುದ್ದೆಗಳನ್ನು ಭರ್ತಿ ಮಾಡಲು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳನ್ನು ನವೆಂಬರ್ 25ರಿಂದ ಡಿಸೆಂಬರ್ 9ರವರೆಗೆ ಮಹಾನಗರ ಪಾಲಿಕೆಯ ಆಡಳಿತ ಶಾಖೆಯಲ್ಲಿ ಅಥವಾ ಪಾಲಿಕೆಯ ಅಧಿಕೃತ ವೆಬ್‌ಸೈಟ್ www.belagavicity.mrc.gov.in ಮೂಲಕ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 9ರ ಸಂಜೆ 5.30 ಗಂಟೆಯೊಳಗೆ ಮಹಾನಗರ ಪಾಲಿಕೆಯ ಕಚೇರಿಗೆ ಸಲ್ಲಿಸಬೇಕು.

ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಾಲಿಕೆಯ ಅಧಿಕೃತ ವೆಬ್‌ಸೈಟ್ ಹಾಗೂ ಮುಖ್ಯ ಕಚೇರಿಯ ಸೂಚನಾ ಫಲಕದಲ್ಲಿ ವೀಕ್ಷಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ದೋಷ – ಉತ್ಪಾದನೆ ಕುಂಠಿತ

Spread the loveರಾಯಚೂರು: ಜಿಲ್ಲೆಯ ಯರಮರಸ್‌ನಲ್ಲಿರುವ ವೈಟಿಪಿಎಸ್  ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎರಡನೇ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಭಾರೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ