Breaking News

ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Spread the love

ನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ನಂದಿವಾಡಿ ಗ್ರಾಮದ ನಿವಾಸಿ ಐರಾವತಿ ಖೋತ (40) ಕೊಲೆಯಾದ ಮಹಿಳೆ. ಮೃತ ಮಹಿಳೆ ಕಳೆದ ಎರಡು ವರ್ಷಗಳಿಂದ ಸಂಜು ಎಂಬಾತನೊಂದಿಗೆ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇಬ್ಬರೂ ಒಂದೇ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಈ ನಡುವೆ ಸಂಜು ಬೇರೆ ಯುವತಿಯೊಂದಿಗೆ ವಿವಾಹವಾಗಲು ಸಿದ್ಧತೆ ನಡೆಸಿದ್ದ ಎನ್ನಲಾಗಿದೆ. ಈ ವಿಚಾರ ತಿಳಿದ ಐರಾವತಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದು, ಇದೇ ವಿಚಾರವಾಗಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಐರಾವತಿಯನ್ನು ಚಿಕ್ಕೋಡಿ ಹೊರವಲಯಕ್ಕೆ ಕರೆದೊಯ್ದು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಕೊಲೆಗೆ ನಿಖರ ಕಾರಣ ಹಾಗೂ ಘಟನೆಯಲ್ಲಿ ಯಾರ ಪಾತ್ರವಿದೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ವಿಷಯ ತಿಳಿಯುತ್ತಿದ್ದಂತೆ ಚಿಕ್ಕೋಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಘಟನೆಯ ಹಿಂದಿನ ಸತ್ಯಾಂಶ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ತೋಟದಲ್ಲಿ AI ಚಿರತೆ ಸೃಷ್ಟಿಸಿ ಪುಂಡಾಟ – ಕಿಡಿಗೇಡಿಗಾಗಿ ಪೊಲೀಸರ ಹುಡುಕಾಟ

Spread the loveದಾವಣಗೆರೆ: ಕಿಡಿಗೇಡಿಯೊಬ್ಬ ತೋಟದಲ್ಲಿ ಚಿರತೆ ಓಡಾಡುವಂತೆ AI ಚಿತ್ರ ಸೃಷ್ಟಿಸಿ ಜನರಲ್ಲಿ ಆತಂಕ ಮೂಡಿಸಿದ ಘಟನೆ ಚನ್ನಗಿರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ