Breaking News

ಪತ್ರಕರ್ತೆ ಸುನಿತಾ ದೇಸಾಯಿಗೆ ‘ಸೇವಾರತ್ನ’ ಪ್ರಶಸ್ತಿ

Spread the love

ಬೆಳಗಾವಿ: ಬಡ ಮಕ್ಕಳಿಗೆ ಅನ್ನ, ಆಶ್ರಯ ಒದಗಿಸಲು ಉಚಿತ ಪ್ರಸಾದ ನಿಲಯ ಆರಂಭಿಸಿದ್ದ ಡಾ. ಶಿವಬಸವ ಮಹಾಸ್ವಾಮೀಜಿ ಅವರ 137ನೇ ಜಯಂತಿ ಮಹೋತ್ಸವದಲ್ಲಿ ಬೆಳಗಾವಿಯ ಹಿರಿಯ ಪತ್ರಕರ್ತೆ ಸುನಿತಾ ದೇಸಾಯಿ ಅವರಿಗೆ ‘ಸೇವಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ನಾಗನೂರು ಶ್ರೀ ರುದ್ರಾಕ್ಷಿಮಠ ನೀಡುವ ಈ ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿಪತ್ರ ಮತ್ತು ಫಲಕವನ್ನು ಒಳಗೊಂಡಿದೆ. ಡಿಸೆಂಬರ್ 8ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ದೇಸಾಯಿ ಅವರನ್ನು ಗೌರವಿಸಲಾಗುವುದು ಎಂದು ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ತಿಳಿಸಿದ್ದಾರೆ.

ಡಿ. 6ರಿಂದ ಮೂರು ದಿನ ಜಯಂತಿ ಮಹೋತ್ಸವ

ಬೆಳಗಾವಿಯಲ್ಲಿ ಡಿಸೆಂಬರ್ 6, 7 ಮತ್ತು 8ರಂದು ಜಯಂತಿ ಮಹೋತ್ಸವ ನಡೆಯಲಿದೆ. ಈ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಗೌರವಿಸಲಾಗುವುದು ಎಂದು ಮಠ ತಿಳಿಸಿದೆ.

ಕರ್ನಾಟಕ ಏಕೀಕರಣ ಮತ್ತು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಶಿವಬಸವ ಮಹಾಸ್ವಾಮೀಜಿ ಅವರು ಗಡಿಭಾಗದಲ್ಲಿ ‘ನಾಗನೂರು ಸ್ವಾಮೀಜಿ’ ಎಂದೇ ಜನಪ್ರಿಯರಾಗಿದ್ದರು. 1932ರಲ್ಲೇ ಬಡ ಮಕ್ಕಳಿಗಾಗಿ ಉಚಿತ ಪ್ರಸಾದ ನಿಲಯ ಆರಂಭಿಸಿದ್ದ ಅವರು ಜಾತಿ, ಮತ, ಪಂಥಗಳ ಭೇದವಿಲ್ಲದೆ ಅನ್ನ ಮತ್ತು ಆಶ್ರಯ ಒದಗಿಸಿದ್ದರು. ಏಳು ದಶಕಗಳ ಕಾಲ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು ಎಂದು ಮಠದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ತ್ರಿಷಾ

Spread the loveಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠಕ್ಕೆ  ಬಹುಭಾಷಾ ನಟಿ ತ್ರಿಷಾ ಕೃಷ್ಣನ್  ಅವರು ಭೇಟಿ ನೀಡಿ, ದೇವಿಯ ದರ್ಶನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ