ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಧಾನಸೌಧ ಪೊಲೀಸರಿಗೆ ದೂರು ನೀಡಿದೆ.
ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೂ ಇಡಿ ದೂರು ನೀಡಿದೆ. ಹೈಕೋರ್ಟ್ ಆದೇಶದ ಮೇರೆಗೆ ಇಡಿ ಈ ದೂರು ಸಲ್ಲಿಸಿದೆ. ಪಿಎಂಎಲ್ಎ ಕಾಯ್ದೆಯ ಸೆಕ್ಷನ್ 66(2) ಅಡಿಯಲ್ಲಿ ದೂರು ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು.
ಇಡಿ ನೀಡಿರುವ ದೂರನ್ನು ಸ್ವೀಕರಿಸಿರುವ ವಿಧಾನಸೌಧ ಪೊಲೀಸರು, ಮುಂದಿನ ಕ್ರಮ ಕೈಗೊಳ್ಳುವ ಮೊದಲು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಕಚೇರಿಗೆ ದೂರನ್ನು ಕಳುಹಿಸಿ ಸಲಹೆ ಪಡೆಯಲು ನಿರ್ಧರಿಸಿದ್ದಾರೆ.
ಈಗಾಗಲೇ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಆರೋಪ ಮಾಡಿದೆ. ಹೀಗಾಗಿ ಎಫ್ಐಆರ್ ದಾಖಲಿಸುವ ವಿಚಾರದಲ್ಲಿ ಪೊಲೀಸರು ತರಾತುರಿ ಮಾಡದೆ ಕಾನೂನು ಸಲಹೆ ಪಡೆಯುತ್ತಿದ್ದಾರೆ.
ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಆರೋಪ ಮಾಡಲಾಗಿತ್ತು. ಪ್ರತ್ಯೇಕವಾಗಿ ಎಫ್ಐಆರ್ ದಾಖಲಾದರೆ ಇಡಿ ತನಿಖೆ ಆರಂಭಿಸಲಿದೆ. ಸದ್ಯ ಎಫ್ಐಆರ್ ದಾಖಲಾಗುವುದನ್ನೇ ಇಡಿ ಕಾಯುತ್ತಿದೆ.
Laxmi News 24×7