Breaking News

ಜೈಲಿನಿಂದ ಹೊರಬರುತ್ತಿದ್ದಂತೆ ಎಂಇಎಸ್ ಮುಖಂಡ ಶುಭಂ ಶಳಕೆ ಉದ್ಧಟತನ – ಜೈ ಮರಾಠಿ, ಜೈ ಮಹಾರಾಷ್ಟ್ರ ಘೋಷಣೆ

Spread the love

ಬೆಳಗಾವಿ: 36 ದಿನಗಳ ಕಾಲ ಜೈಲಿನಲ್ಲಿ ಕಳೆದರೂ ಎಂಇಎಸ್ ಮುಖಂಡ ಶುಭಂ ಶಳಕೆ ವರ್ತನೆಯಲ್ಲಿ ಯಾವುದೇ ಬದಲಾವಣೆ ಆದಂತೆ ಕಾಣುತ್ತಿಲ್ಲ. ಜೈಲಿನಿಂದ ಬಿಡುಗಡೆಯಾಗಿ ಹೊರಬರುತ್ತಿದ್ದಂತೆ ಮತ್ತೆ ಜೈ ಮರಾಠಿ, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗುವ ಮೂಲಕ ತನ್ನ ಉದ್ಧಟತನ  ಪ್ರದರ್ಶಿಸಿದ್ದಾನೆ.

ಬೆಳಗಾವಿ ತಾಲೂಕಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕಳೆದ 36 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಶುಭಂ ಶಳಕೆ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಬಿಡುಗಡೆ ಬಳಿಕ ಆತ ಸೆಲ್ಫಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 36 ದಿನಗಳ ನಂತರ ಜೈಲಿನಿಂದ ಹೊರಬಂದಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಆದಷ್ಟು ಬೇಗ ಎಲ್ಲರನ್ನೂ ಭೇಟಿಯಾಗುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ, ಜೈಲಿನಿಂದ ಹೊರಬರುತ್ತಿದ್ದಂತೆ ಜೈ ಮರಾಠಿ, ಜೈ ಮಹಾರಾಷ್ಟ್ರ ಎಂಬ ಘೋಷಣೆಗಳನ್ನು ಕೂಗಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಗಡಿ ವಿಚಾರವಾಗಿ ಬೆಳಗಾವಿಯಲ್ಲಿ ಆಗಾಗ ಭಾಷಾ ಮತ್ತು ಪ್ರಾದೇಶಿಕ ಸಂಘರ್ಷಕ್ಕೆ ಕಾರಣವಾಗುತ್ತಿರುವ ಎಂಇಎಸ್ ಕಾರ್ಯಕರ್ತರ ವರ್ತನೆಗೆ ಈ ಘಟನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಶುಭಂ ಶಳಕೆ ವಿರುದ್ಧ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಆತ ಜೈಲು ಸೇರಿದ್ದ ಎನ್ನಲಾಗಿದೆ. ಇದೀಗ 36 ದಿನಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಆತ, ಹೊರಬರುತ್ತಿದ್ದಂತೆ ಹಂಚಿಕೊಂಡಿರುವ ವಿಡಿಯೋದಲ್ಲಿ ನೀಡಿರುವ ಹೇಳಿಕೆ ಹಾಗೂ ಘೋಷಣೆಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.


Spread the love

About Laxminews 24x7

Check Also

KRS ಡ್ಯಾಂನಲ್ಲಿ ದಿನೇ ದಿನೆ ಕುಸಿಯುತ್ತಿದೆ ನೀರಿನ ಮಟ್ಟ – ಬೇಸಿಗೆಯಲ್ಲಿ ಜಲಕ್ಷಾಮದ ಆತಂಕ!

Spread the loveಮಂಡ್ಯ: ಹಳೇ ಮೈಸೂರು ಭಾಗದ ಕೆಆರ್‌ಎಸ್ ಜಲಾಶಯದ  ನೀರಿನ ಮಟ್ಟದಲ್ಲಿ ಗಣನೀಯ ಕುಸಿತ ಕಂಡುಬರುತ್ತಿದ್ದು, ದಿನದಿಂದ ದಿನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ