ಬೆಳಗಾವಿ: ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಸದಸ್ಯರು ಲಕ್ಷ್ಮಣ ಕಸರ್ಲೆಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಭೇಟಿಯಾಗಿ, ಆಯ್ಕೆಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಿದರು.
ನೂತನ ಸದಸ್ಯರನ್ನು ಅಭಿನಂದಿಸಿದ ಚನ್ನರಾಜ ಹಟ್ಟಿಹೊಳಿ ಅವರು, ಸಂಘದ ಅಭಿವೃದ್ಧಿ ಹಾಗೂ ರೈತರ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಶುಭ ಹಾರೈಸಿದರು.
Laxmi News 24×7