Breaking News

ಒತ್ತುವರಿ ವಿಚಾರಕ್ಕೆ ಗಲಾಟೆ – ಗುಂಡು ಹಾರಿಸಿ ಯುವಕನ ಕೊಲೆ

Spread the love

ಬೆಂಗಳೂರು: ಒತ್ತುವರಿ ವಿಚಾರಕ್ಕೆ ಶುರುವಾದ ಗಲಾಟೆ ಓರ್ವ ಕೊಲೆಯಲ್ಲಿ ಅಂತ್ಯವಾಗಿದೆ. ಗುಂಡು ಹಾರಿಸಿ ಯುವಕನನ್ನ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಯಲದ ಹೊಸಕೋಟೆ ಸಮೀಪದ ಸೋಲೂರಿನಲ್ಲಿ ನಡೆದಿದೆ.

ಲಿಖಿಕ್ ಗೌಡ ( 25 ) ಕೊಲೆಯಾದ ಯುವಕ. ರಮೇಶ್ ಕೊಲೆಗೈದ ಆರೋಪಿ.

ಆಗಿದ್ದೇನು?
ಆಶ್ರಯ ಯೋಜನೆ ಜಮೀನು ಗುರುತು ಮಾಡುವ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ಸರ್ಕಾರಿ ಜಾಮೀನಿನ ಸುಮಾರು 10 ಗುಂಟೆ ಜಾಗವನ್ನ ಆರೋಪಿ ರಮೇಶ್‌ ಒತ್ತುವರಿ ಮಾಡಿಕೊಂಡಿದ್ದ. ಹೀಗಾಗಿ ಒತ್ತುವರಿ ತೆರವಿಗೆ ಹೋಗಿದ್ದ ವೇಳೆ ರಮೇಶ್ ಮತ್ತು ಲಿಖಿತ್ ಗೌಡ ನಡುವೆ ಗಲಾಟೆ ನಡೆದಿದೆ. ಈ ವೇಳೆ ಲೈಸೆನ್ಡ್ ಗನ್ ನಿಂದ ರಮೇಶ್‌, ಲಿಖಿತ್ ಗೌಡ ಮೇಲೆ ಗುಂಡು ಹಾರಿಸಿದ್ದಾನೆ.

ಇದರಿಂದ ಲಿಖಿತ್‌ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಆರೋಪಿ ರಮೇಶ್‌ನನ್ನ ಬಂಧಿಸಿದ್ದಾರೆ.


Spread the love

About Laxminews 24x7

Check Also

ಮಾತುಕತೆಗಾಗಿ ಮಸ್ತಾನ್‌ ದರ್ಗಾ ಬಳಿಯ ಲಾಡ್ಜ್‌ಗೆ ಬಂದಿದ್ದ ಜೋಡಿ – ಇಂದು ಚೆಕ್‌ಔಟ್‌ ಆಗುವಾಗ ಗಲಾಟೆ; ಇರಿದು ಕೊಂದ ಪ್ರಿಯಕರ

Spread the loveಬೆಂಗಳೂರು: ಇಲ್ಲಿನ ಕಾಟನ್‌ಪೇಟೆಯ  ಮಸ್ತಾನ್‌ ದರ್ಗಾ ಬಳಿಯಿರುವ ರಿಜೆನ್ಸಿ ಇನ್‌ ಲಾಡ್ಜ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಬರ್ಬರ ಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ