Breaking News

814 ಪಿಯು ಉಪನ್ಯಾಸಕರ ನೇಮಕಕ್ಕೆ KEA ಅಧಿಸೂಚನೆ – ಆನ್‌ಲೈನ್ ಅರ್ಜಿ ಸಲ್ಲಿಸಲು ಡಿ.25 ಕೊನೆ ದಿನ

Spread the love

ಬೆಂಗಳೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಅಧಿಸೂಚನೆ ಹೊರಡಿಸಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಡಿ.25 ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಡಿ.26 ಕೊನೆ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಟ್ಟು ಉಪನ್ಯಾಸಕರ ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದ 36 ಹುದ್ದೆಗಳು ಸೇರಿವೆ. ಸ್ನಾತಕೋತ್ತರ ಪದವಿ ಜೊತೆಗೆ ಬಿ.ಎಡ್ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕನ್ನಡ ವಿಷಯದಲ್ಲಿ 89 ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಹಾಗೆಯೇ ಇಂಗ್ಲಿಷ್-145, ಇತಿಹಾಸ-50, ಅರ್ಥಶಾಸ್ತ್ರ-90, ರಾಜ್ಯಶಾಸ್ತ್ರ-25, ಸಮಾಜಶಾಸ್ತ್ರ-25, ಭೂಗೋಳ ಶಾಸ್ತ್ರ-10, ವಾಣಿಜ್ಯ ಶಾಸ್ತ್ರ-150, ಭೌತಶಾಸ್ತ್ರ-30, ರಸಾಯನಶಾಸ್ತ್ರ-30, ಗಣಿತ-30, ಜೀವಶಾಸ್ತ್ರ-30, ಕಂಪ್ಯೂಟರ್ ಸೈನ್ಸ್-110 ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಅರ್ಹತೆ ಸೇರಿದಂತೆ ಇತರ ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್ ನೋಡಲು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಕುರುಕಲು ತಿಂಡಿ ಪೊಟ್ಟಣದಲ್ಲಿದ್ದ ಆಟಿಕೆ ನುಂಗಿ ಮಗು ಸಾವು

Spread the loveದಾವಣಗೆರೆ: ಕುರುಕಲು ತಿಂಡಿ ಪೊಟ್ಟಣದಲ್ಲಿದ್ದ ಆಟಿಕೆ ನುಂಗಿ 4 ವರ್ಷದ ಮಗು  ಸಾವನ್ನಪ್ಪಿದ ಘಟನೆ ಚನ್ನಗಿರಿ  ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ