Breaking News

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್‌ಬಾಸ್ ಖ್ಯಾತಿಯ ಅನುಷಾ ರೈ ಭೇಟಿ; ವಿಶೇಷ ಪೂಜೆ

Spread the love

ಉಡುಪಿ: ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ ಅವರಿಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ  ಭೇಟಿ ನೀಡಿದರು. ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ವತಿಯಿಂದ ಅನುಷಾ ರೈ ಅವರನ್ನು ಗೌರವಿಸಲಾಯಿತು.

Anusha Rai 2

ಬಳಿಕ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದ ಅವರು, ದೇವಸ್ಥಾನದ ವತಿಯಿಂದ ಆಯೋಜಿಸಲಾಗಿರುವ ವಿಶಿಷ್ಟ ಧಾರ್ಮಿಕ ಅಭಿಯಾನವಾದ ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಭಿಯಾನದ ಅಂಗವಾಗಿ ಭಕ್ತಿಭಾವದಿಂದ ನವದುರ್ಗಾ ಲೇಖನ ಬರೆದ ಅನುಷಾ ರೈ, ಕಾಪು ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದರು.

ಬಿಗ್‌ಬಾಸ್ ರಿಯಾಲಿಟಿ ಶೋ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ನಟಿ ಅನುಷಾ ರೈ ಅವರು, ದೇವಿಯ ದರ್ಶನದೊಂದಿಗೆ ಧಾರ್ಮಿಕ ಅಭಿಯಾನದಲ್ಲಿಯೂ ಪಾಲ್ಗೊಂಡಿದ್ದು ಭಕ್ತರ ಗಮನ ಸೆಳೆಯಿತು.


Spread the love

About Laxminews 24x7

Check Also

ಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಯು.ಟಿ ಖಾದರ್ ಸ್ಪಷ್ಟನೆ

Spread the loveಶಿವಮೊಗ್ಗ: ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ ಎಂಬ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಆರೋಗ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ