Breaking News

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಕಾಮುಕನಿಗೆ 21 ವರ್ಷ ಜೈಲು

Spread the love

ದಾವಣಗೆರೆ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ದಾವಣಗೆರೆ  ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್‌  21 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹೊನ್ನಾಳಿ ತಾಲೂಕಿನ ಗ್ರಾಮವೊಂದರ 24 ವರ್ಷದ ಅಪರಾಧಿ ಬಾಲಕಿಯೊಬ್ಬಳನ್ನು ಮನೆಗೆ ಕರೆದೊಯ್ದು ನಿರಂತರ ಅತ್ಯಾಚಾರವೆಸಗುತ್ತಿದ್ದ ವಿಚಾರ 2024 ರಲ್ಲಿ ಬೆಳಕಿಗೆ ಬಂದಿತ್ತು. ಈ ಸಂಬಂಧ ಪೋಕ್ಸೋ ಪ್ರಕರಣ  ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ವೇಳೆ ಯುವಕನ ಕೃತ್ಯ ಸಾಬೀತಾಗಿದ್ದು, ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ.

ಅಪರಾಧಿಗೆ 21 ವರ್ಷ ಜೈಲು, 30,000 ರೂ. ದಂಡ ಹಾಗೂ ಸಂಸತ್ರಸ್ತೆಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್‌ ಆದೇಶಿಸಿದೆ. ಸಂತ್ರಸ್ತೆ ಪರವಾಗಿ ಸರ್ಕಾರಿ ವಕೀಲೆ ಗೋಪಿಕಾ ಅವರು ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಯು.ಟಿ ಖಾದರ್ ಸ್ಪಷ್ಟನೆ

Spread the loveಶಿವಮೊಗ್ಗ: ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ ಎಂಬ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಆರೋಗ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ