Breaking News

ನನಗೆ ಜಾತಿ ಮೇಲೆ ನಂಬಿಕೆ ಇಲ್ಲ, ಮಾನವ ಧರ್ಮದ ಮೇಲೆ ನಂಬಿಕೆ: ಡಿಕೆಶಿ

Spread the love

ರಾಮನಗರ: ನನಗೆ ಜಾತಿಯ ಮೇಲೆ ನಂಬಿಕೆ ಇಲ್ಲ. ಮನುಷ್ಯತ್ವ ನನಗೆ ಬಹಳ ಮುಖ್ಯ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಗಳು, ಬಸವಣ್ಣನವರ ಆಶಯಗಳ ಮೇಲೆ ನಾನು ರಾಜಕಾರಣವನ್ನು ಮಾಡುತ್ತಿದ್ದೇನೆ. ನನ್ನ ಈ 40 ವರ್ಷಗಳ ರಾಜಕಾರಣದಲ್ಲಿ ಯಾರನ್ನೂ ನೀನು ಯಾವ ಜಾತಿ ಎಂದು ಕೇಳಿಲ್ಲ. ಮಾನವೀಯತೆಯೇ ಬಹುದೊಡ್ಡ ಧರ್ಮ ಎಂದು ನಂಬಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು.

ಕನಕಪುರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಪರಿಶಿಷ್ಟ ಜಾತಿ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಕೃತಜ್ಞತಾ ಅಭಿನಂದನಾ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ನನಗೆ ಸಿಕ್ಕ ಈ ಅಧಿಕಾರ ನನ್ನದಲ್ಲ, ನಿಮ್ಮದು. ನನ್ನನ್ನು 10 ಬಾರಿ ಸಾತನೂರು, ಕನಕಪುರ ಮಹಾಜನತೆ ಆರಿಸಿ ಆಶೀರ್ವದಿಸಿ ಕಳುಹಿಸಿದ್ದೀರಿ. ಇಂದಿನ ಈ ಅಭಿಮಾನದ ಸನ್ಮಾನದ ಶ್ರೇಯ ನಿಮಗೇ ಸಲ್ಲಬೇಕು. ಸೇವೆ ಮಾಡುವ ಭಾಗ್ಯ ಕೊಟ್ಟಿದ್ದೀರಿ. ನೀವು ಇಟ್ಟಿರುವ ನಂಬಿಕೆ ಉಳಿಸಿಕೊಂಡು, ಕ್ಷೇತ್ರದ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತೇನೆ ಎಂದು ವಾಗ್ದಾನ ನೀಡಿದರು.


Spread the love

About Laxminews 24x7

Check Also

ರಾಜ್ಯದ 440 ಪದವಿ ಕಾಲೇಜುಗಳಿಗೆ ಶೀಘ್ರ ಖಾಯಂ ಪ್ರಾಂಶುಪಾಲರ ನೇಮಕ: ಸಚಿವ ರಾಯರೆಡ್ಡಿ

Spread the loveಗದಗ: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ 440 ಸರ್ಕಾರಿ ಪದವಿ ಕಾಲೇಜುಗಳಿಗೆ ಶೀಘ್ರದಲ್ಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ