Breaking News

ಕೊಡಗಿನಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ – ಡ್ರೋನ್, ಸಾಕಾನೆಗಳ ಮೂಲಕ ಹುಲಿ ಪತ್ತೆಗೆ ಬಲೆ!

Spread the love

ಮಡಿಕೇರಿ: ಕೊಡಗಿನ  ಮೈತಾಡಿ ಹಾಗೂ ಹಾಲುಗುಂದ ಗ್ರಾಮಗಳಲ್ಲಿ ಹುಲಿ ದಾಳಿಗೆ ಸಿಲುಕಿ ಜಾನುವಾರುಗಳು ಸಾವನ್ನಪ್ಪಿರುವ ಹಿನ್ನೆಲೆ ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆಯನ್ನ  ತೀವ್ರಗೊಳಿಸಿದೆ.

ಕಳೆದ ಒಂದು ವಾರದಿಂದ ವೀರಾಜಪೇಟೆ ವಲಯದಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಹುಲಿಯನ್ನ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಹುಲಿಯನ್ನು ಸೆರೆಹಿಡಿಯದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಅರಣ್ಯ ಇಲಾಖೆ ಹಗಲು-ರಾತ್ರಿ ಕಾರ್ಯಾಚರಣೆಗೆ ಮುಂದಾಗಿದೆ.

ಕೊಡಗಿನ ವೀರಾಜಪೇಟೆ ವಲಯದಲ್ಲಿ ಹುಲಿ ಹಾವಳಿ ಮುಂದುವರಿದಿದ್ದು, ಮೈತಾಡಿ ಹಾಗೂ ಹಾಲುಗುಂದ ಗ್ರಾಮಗಳಲ್ಲಿ ಹುಲಿ ದಾಳಿಗೆ ಸಿಲುಕಿ ಹಸುಗಳು ಸಾವನ್ನಪ್ಪಿವೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಹುಲಿಯನ್ನ ಕೂಡಲೇ ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಕಾರ್ಯಾಚರಣೆಯನ್ನ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಹುಲಿಯ ಚಲನವಲನಗಳನ್ನ ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನ ಬಳಸಲಾಗುತ್ತಿದ್ದು, ವಿವಿಧೆಡೆ ಟ್ರ್ಯಾಪ್ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ.

ಇನ್ನು ಕಾರ್ಯಾಚರಣೆಗೆ ದುಬಾರೆ ಸಾಕಾನೆಗಳಾದ `ಶ್ರೀರಾಮ’ ಮತ್ತು `ಲಕ್ಷ್ಮಣ’ನನ್ನು ನಿಯೋಜಿಸಲಾಗಿದೆ. ಮೈತಾಡಿ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯನ್ನ ಸೆರೆಹಿಡಿಯಲು ಬೋನನ್ನೂ ಅಳವಡಿಸಲಾಗಿದೆ. ಆದರೆ, ಸ್ಥಳದಿಂದ ಸ್ಥಳಕ್ಕೆ ಸಂಚರಿಸುತ್ತಿರುವ ಹುಲಿ ಅರಣ್ಯ ಇಲಾಖೆ ಸಿಬ್ಬಂದಿಗೆ ಇನ್ನೂ ಸಿಗದೆ ತಪ್ಪಿಸಿಕೊಳ್ಳುತ್ತಿದೆ. ವೀರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಉಪವಲಯ ಅರಣ್ಯಾಧಿಕಾರಿ ರಾಘವ ಅವರ ನೇತೃತ್ವದಲ್ಲಿ 25ಕ್ಕೂ ಅಧಿಕ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಹಗಲು-ರಾತ್ರಿ ಎನ್ನದೆ ನಡೆಯುತ್ತಿರುವ ಹುಲಿ ಸೆರೆ ಕಾರ್ಯಾಚರಣೆ ತಡರಾತ್ರಿಯವರೆಗೂ ಮುಂದುವರಿದಿದೆ. ಆದಷ್ಟು ಬೇಗ ಹುಲಿಯನ್ನು ಸೆರೆಹಿಡಿದು ಗ್ರಾಮಸ್ಥರ ಆತಂಕವನ್ನು ದೂರ ಮಾಡಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.


Spread the love

About Laxminews 24x7

Check Also

ರಾಜ್ಯದ 440 ಪದವಿ ಕಾಲೇಜುಗಳಿಗೆ ಶೀಘ್ರ ಖಾಯಂ ಪ್ರಾಂಶುಪಾಲರ ನೇಮಕ: ಸಚಿವ ರಾಯರೆಡ್ಡಿ

Spread the loveಗದಗ: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ 440 ಸರ್ಕಾರಿ ಪದವಿ ಕಾಲೇಜುಗಳಿಗೆ ಶೀಘ್ರದಲ್ಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ