Breaking News

ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್ :ಸಚಿವ ಸುರೇಶ್ ಕುಮಾರ್

Spread the love

ಬೆಂಗಳೂರು :  ಶಿಕ್ಷಕರ ವರ್ಗಾವಣೆ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಕೂಡ ಹೊರಡಿಸಿತ್ತು. ಈಗ ಅಧಿಕಾರಿಗಳ ಸಭೆಯಲ್ಲಿ ಆಗಸ್ಟ್ ನಲ್ಲಿ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಸಿದ್ಧಗೊಳಿಸಿ, ಪ್ರಕಟಿಸುವಂತೆ ಅಧಿಕಾರಿಗಳಿಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಶಿಕ್ಷಕರ ವರ್ಗಾವಣೆಯ ಸಂಬಂಧ ನಿಯಮಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿ. ಈ ಕಾಯ್ದೆಗೆ ಈಗಾಗಲೇ ಅಧಿವೇಶನದಲ್ಲೂ ಅನುಮೋದನೆ ದೊರೆತಿದೆ. ಹೀಗಾಗಿ ಕೂಡಲೇ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಎಂಬುದಾಗಿ ಇಂದು ನಡೆದಂತ ಅಧಿಕಾರಿಗಳ ಸಭೆಯಲ್ಲಿ ಸೂಚಿಸಿದ್ದೇನೆ. ಶಿಕ್ಷಕ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯ ಮೂಲಕ ಆಗಸ್ಟ್ ನಲ್ಲಿ ಶಿಕ್ಷಕರ ವರ್ಗಾವಣೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.

 ಕಳೆದ ಬಾರಿ ಕಡ್ಡಾಯ ವರ್ಗಾವಣೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಂತ ಶಿಕ್ಷಕರು ಈ ಬಾರಿ ಮೊದಲ ಆದ್ಯತೆಯಲ್ಲಿ ವರ್ಗಾವಣೆಗೊಳ್ಳಲಿದ್ದಾರೆ. ಆಗಸ್ಟ್ ನಲ್ಲಿ ಈ ಸಂಬಂಧ ವರ್ಗಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ