Breaking News

ಸತ್ಯಂಪೇಟ ಮೇಲಿನ ಪ್ರಕರಣ ರದ್ದುಪಡಿಸಲು ಆಗ್ರಹ

Spread the love

ಬೆಳಗಾವಿ: ‘ಕಲಬುರ್ಗಿ ಜಿಲ್ಲೆಯ ಶಹಾಪುರದ ಶರಣ ಸಾಹಿತಿ ವಿಶ್ವರಾಧ್ಯ ಸತ್ಯಂಪೇಟ ಅವರ ಮೇಲೆ ದಾಖಲಿಸಲಾದ ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವ ಸೇನೆ ಹಾಗೂ ಬಸವಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ‘ಅನುಭವಿ ಪತ್ರಕರ್ತ, ವೈಚಾರಿಕ ಚಿಂತಕ ಹಾಗೂ ಶರಣ ಸಾಹಿತಿ ವಿಶ್ವರಾಧ್ಯ ಅವರ ಮೇಲೆ ದುರುದ್ದೇಶದಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ದೂರಿದರು.

‘ಜಾಗತಿಕ ಲಿಂಗಾಯತ ಮಹಾಸಭೆ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಆಗಿರುವ ಸತ್ಯಂಪೇಟ ತಮ್ಮ ಪ್ರಗತಿಪರ ಚಿಂತನೆಗಳ ಮೂಲಕ ನಾಡಿನಾದ್ಯಂತ ಬಸವ ತತ್ವಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಹಲವಾರು ಮಹತ್ವದ ಪುಸ್ತಕಗಳನ್ನು ರಚಿಸಿದ್ದಾರೆ. ಬಸವ ಮಾರ್ಗ ಎಂಬ ಜಾಲತಾಣದ ಮೂಲಕ ಶರಣರ ತತ್ವ ಪ್ರಚಾರ ಮಾಡುತಿದ್ದಾರೆ. ವೈಚಾರಿಕ ಲೇಖನಗಳಿಂದಾಗಿ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೊನ್ನಾಳಿಯ ಸ್ವಾಮೀಜಿ ಒಬ್ಬರ ಬಗ್ಗೆ ಬರೆದ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಲೇಖನವನ್ನು ನೆಪವಾಗಿಟ್ಟುಕೊಂಡು ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಮುಖ್ಯಮಂತ್ರಿ ಮಧ್ಯಪ್ರವೇಶಿಸಬೇಕು’ ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಬಸವ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಗುಡಸ, ‘ತಕ್ಷಣ ಪ್ರಕರಣ ರದ್ದುಪಡಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಜಾಗತಿಕ ಲಿಂಗಾಯತ ಮಹಾಸಭೆಯ ಆನಂದ ಕರ್ಕಿ, ಬಸವ ಭೀಮ ಸೇನೆ ಅಧ್ಯಕ್ಷ ಆರ್.ಎಸ್. ದರ್ಗೆ, ಲಿಂಗಾಯತ ಸೇವಾ ಸಮಿತಿಯ ರಾಜು ಕುಂದಗೋಳ, ಸಿದ್ದರಾಮ ಸಾವಳಗಿ, ವಿ.ಕೆ. ಪಾಟೀಲ, ರಾಜಶ್ರೀ ದಯನ್ನವರ, ಶಿವಯೋಗಿ ಪಾಟೀಲ ಇದ್ದರು.


Spread the love

About Laxminews 24x7

Check Also

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ…

Spread the love ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ… ಖರೀದಿಗಾಗಿ ಮುಗಿ ಬೀಳುತ್ತಿರುವ ಗ್ರಾಹಕರು!!! ಮಾನ್ಸೂನ್ ಆರಂಭಗೊಂಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ