Breaking News

ನಾನು ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗಲೇ ಹೇಳಿದಂತೆ ಜನತೆ ಹರಿಸುವುದು ಮತ್ತು ರಾಜ್ಯ ರೈತರ ಕಣ್ಣೀರು ಒರೆಸುವುದೇ ನನ್ನ ಆದ್ಯತೆಯಾಗಿದೆ

Spread the love

ಜಂಟಿ ಅಧಿವೇಶದಲ್ಲಿ ರಾಜ್ಯಪಾಲರ ಭಾಷಣ ಬಳಿಕ ನೀರಾವರಿ ಇಲಾಖೆ ಬಗ್ಗೆ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 4050 ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ. ಈ ವಿಷಯವಾಗಿ ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಜಂಟಿ ಸದನ ಉದ್ದೇಶಿಸಿ ರಾಜ್ಯಾಪಾಲರು ಭಾಷಣ ಮಾಡಿದ ಬಳಿಕ ಜಲಸಂಪನ್ಮೂಲ ಇಲಾಖೆ ವಿಚಾರವಾಗಿ ಸಚಿವ ರಮೇಶ ಜಾರಕಿಹೊಳಿ ಉತ್ಸುಕತೆಯಿಂದ ಮಾತನಾಡಿದರು.

ನಾನು ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗಲೇ ಹೇಳಿದಂತೆ ಜನತೆ ಹರಿಸುವುದು ಮತ್ತು ರಾಜ್ಯ ರೈತರ ಕಣ್ಣೀರು ಒರೆಸುವುದೇ ನನ್ನ ಆದ್ಯತೆಯಾಗಿದೆ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ಬೃಹತ್ ನೀರವಾರಿ ಯೋಜನೆಗಳನ್ನು ಕೈಗೊಂಡಿದೆ. 12000 ಹೆಕ್ಟೆರ್ ಪ್ರದೇಶದಕ್ಕೆ ಪ್ರಸಕ್ತ ಸಾಲಿನಲ್ಲಿ ನೀರಾವರಿ ಕಲ್ಪಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಮಲಪ್ರಭಾ ಯೋಜನೆ ಕಾಲುವೆಗಳ ಆಧುನೀಕರಣಕ್ಕೆ ಒಂದು ಸಾವಿರ ಕೋಟಿ ರೂ. ಅಂದಾಜು ವೆಚ್ಚ ಆಡಳಿತಾತ್ಮಕ ಅನುಮೋದನೆ ನೀಡಿದೆ. ಅಲ್ಲದೇ ವಿಜಯನಗರ ಕಾಲುವೆಗಳ ಆಧುನೀಕರಣಕ್ಕೆ ಸುಮಾರು 450 ಕೋಟಿ ರೂ. ಸರ್ಕಾರ ಒದಗಿಸಲಿದೆ ಎಂತಲೂ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Spread the loveಬೆಂಗಳೂರು: ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್  ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ