Breaking News

ಆಗಸ್ಟ್​ ಬಂದರೂ ಸುರಿಯುತ್ತಿಲ್ಲ ಮಳೆ; ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Spread the love

ಬೆಂಗಳೂರು : ಆಗಸ್ಟ್​ ತಿಂಗಳು ಆರಂಭಗೊಂಡಿದೆ. ಕಳೆದ ವರ್ಷ ಈ ಹೊತ್ತಿಗೆ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈ ಬಾರಿ ಮಳೆ ಇಲ್ಲದೆ ಜನ ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೇಸಿಗೆ ಸಮಯದಲ್ಲಿ ನೀರಿಗೆ ಹಾಹಾಕಾರ ಏಳುವುದು ಗ್ಯಾರಂಟಿ . ಏಕೆಂದರೆ ಈಗ ಅಂದುಕೊಂಡ ಮಟ್ಟಕ್ಕೆ ಜಲಾಶಯಗಳು ತುಂಬುತ್ತಿಲ್ಲ.

ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ಆದರೆ, ನಂತರ ಮಳೆ ಆಗಲೇ ಇಲ್ಲ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ನಿರೀಕ್ಷಿತ ಮಳೆಯಾಗಿಲ್ಲ. ದಕ್ಷಿಣದಲ್ಲಿ ಹಾಸನ ಮೈಸೂರು ಸೇರಿದಂತೆ ಕಾವೇರಿ ಕೊಳ್ಳ ಪ್ರದೇಶಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ರೈತರಿಗೆ ಅನುಕೂಲ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ