Breaking News

ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ

Spread the love

ವಿಜಯಪುರ: ಕೊರೊನಾ ಸೋಂಕು ತಗಲಿದ ವ್ಯಕ್ತಿಯ ಕುಟುಂಬಕ್ಕೆ ಸ್ಥಳೀಯರು ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ವಿಜಯಪುರದ ಚಾಲುಕ್ಯ ನಗರದಲ್ಲಿ ಪುಣೆಯಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆತನ ಕುಟುಂಬದ ಜೊತೆ ಯಾರು ಸಂಪರ್ಕ ಇಟ್ಟುಕೊಳ್ಳಬಾರದು. ಅವರ ಮನೆಗೆ ಪೇಪರ್, ತರಕಾರಿ, ಅಗತ್ಯ ವಸ್ತು ಪೂರೈಕೆ ಮಾಡಬಾರದೆಂದು ಕೆಲವು ಸ್ಥಳೀಯರು ತಕರಾರು ತೆಗೆದಿದ್ದಾರೆ. ಮನೆ ಕೆಲಸಗಾರರಿಗೆ ಕೆಲಸಕ್ಕೆ ಬರದಂತೆ ಅಡಚಣೆ ಉಂಟು ಮಾಡಿ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.

ಇದರಿಂದಾಗಿ ಕಂಗಾಲಾದ ಕುಟುಂಬದವರು ಪ್ರಧಾನಿ, ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಟ್ವೀಟ್ ಮಾಡಿ ನೆರವಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ