Breaking News
Home / new delhi / ಮರಾಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ!

ಮರಾಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ!

Spread the love

ಅಥಣಿ: ತಾಲ್ಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆ ಶನಿವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಮರಾಠಿಯಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

 

‘ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣವಾಗುತ್ತಿರುವುದು ತುಂಬಾ ಖುಷಿಯಾಗಿದೆ. ಕಾರ್ಖಾನೆಯ ಶೇ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ನೀಡಬೇಕು’ ಎಂದು ಮರಾಠಿಯಲ್ಲಿ ಮನವಿ ಮಾಡಿದ್ದರು.

ಈ ಸಕ್ಕರೆ ಕಾರ್ಖಾನೆಯ ನಿರ್ಮಾಣದಲ್ಲಿ ಬಂಡವಾಳ ಹೂಡಿರುವ ನೆರೆಯ ಮಹಾರಾಷ್ಟ್ರದ ಕೃಷಿ ಸಚಿವ ವಿಶ್ವಜೀತ ಕದಂ ತಮ್ಮ ಭಾಷಣ ಮುಗಿದ ನಂತರ ‘ಜೈ ಮಹಾರಾಷ್ಟ್ರ’ ಎಂದು ಕೂಗಿದ್ದರು.

ಇದಕ್ಕೂ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ನೆಲದಲ್ಲಿ ನಿಂತು ‘ಜೈ ಮಹಾರಾಷ್ಟ್ರ’ ಎಂದು ಕೂಗಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕಾರ್ಯಕ್ರಮದಲ್ಲಿ 2,500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದು, ಯಾವುದೇ ಅಂತರ ಕಾಯ್ದುಕೊಂಡಿರಲಿಲ್ಲ. ಸಚಿವ ಶ್ರೀಮಂತ ಪಾಟೀಲ ಸೇರಿದಂತೆ ಬಹುತೇಕರು ಮಾಸ್ಕ್‌ ಕೂಡ ಧರಿಸಿರಲಿಲ್ಲ. ಕಾರ್ಯಕ್ರಮದ ಬ್ಯಾನರ್‌ನಲ್ಲಿ ಕನ್ನಡ ಬಳಸಿರಲಿಲ್ಲ, ಮರಾಠಿಯಲ್ಲಿಯೇ ಬರೆಯಲಾಗಿತ್ತು. ಇದು ಕೂಡ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಸಚಿವ ಶ್ರೀಮಂತ ಪಾಟೀಲ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ