Breaking News

ಕರಾವಳಿಯಲ್ಲಿ ಉತ್ತಮ ಮಳೆ

Spread the love

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ.

ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. ಬೆಳಗಾವಿ ನಗರ, ಹಿರೇಬಾಗೇವಾಡಿ, ಗೋಕಾಕ, ರಾಯಬಾಗದಲ್ಲಿ ಸಾಧಾರಣ ಮಳೆಯಾಗಿದೆ.

ಧಾರವಾಡ ನಗರದ ಟೋಲ್‌ನಾಕಾ ಬಳಿ ರಸ್ತೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಜಿಲ್ಲೆಯ ಕಲಘಟಗಿ, ಅಳ್ನಾವರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ