Breaking News
Home / new delhi / ಲಾಕ್‌ಡೌನ್‌ನಲ್ಲೂ 100 ಯಶಸ್ವಿ ಡಯಾಲಿಸಿಸ್‌

ಲಾಕ್‌ಡೌನ್‌ನಲ್ಲೂ 100 ಯಶಸ್ವಿ ಡಯಾಲಿಸಿಸ್‌

Spread the love

ಬೆಳಗಾವಿ: ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ರೋಟರಿ-ಕೆಎಲ್‌ಇ ಡಯಾಲಿಸಿಸ್ ಕೇಂದ್ರದಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲೂ 100 ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್‌ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಈ ನಿಟ್ಟಿನಲ್ಲಿ ಈಚೆಗೆ ವೈದ್ಯರ ತಂಡಕ್ಕೆ ಶುಭ ಹಾರೈಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಮೂತ್ರಪಿಂಡ ತಜ್ಞ ಡಾ.ವಿಜಯಕುಮಾರ ಪಾಟೀಲ, ‘ಮೂತ್ರಪಿಂಡ ಕಾಯಿಲೆ ಇರುವ ರೋಗಿಗಳಿಗೆ ಡಯಾಲಿಸಿಸ್‌ ಕಡ್ಡಾಯವಾಗಿ ಬೇಕಾಗಿರುವ ಚಿಕಿತ್ಸೆಯಾಗಿದೆ. ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರೋಗಿಗಳು ಹೆದರುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ಧೈರ್ಯವಾಗಿ ಆಸ್ಪತ್ರೆಗೆ ಬಂದು ಡಯಾಲಿಸಿಸ್‌ ಮಾಡಿಸಿಕೊಳ್ಳಬಹುದಾಗಿದೆ’ ಎಂದು ಹೇಳಿದರು.

ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಸಿ.

ಧಾರವಾಡ ಮಾತನಾಡಿ, ‘ಈ ಡಯಾಲಿಸಿಸ್ ಕೇಂದ್ರವು ನಗರದ ದಕ್ಷಿಣ ಭಾಗದ ಜನರ ಸಂಜೀವಿನಿಯಾಗಿದೆ. ಪ್ರಾರಂಭವಾದ ಒಂದೂವರೆ ತಿಂಗಳಲ್ಲೇ 100 ರೋಗಿಗಳಿಗೆ ಡಯಾಲಿಸಿಸ್ ಮಾಡಲಗಿದೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಆರ್.ಆರ್. ವಾಳ್ವೆಕರ, ಡಾ.ಬಿ.ಎಸ್. ಮಹಾಂತಶೆಟ್ಟಿ, ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಇಂದುಮತಿ ವಾಘಮಾರೆ ಇದ್ದರು.

ತಂಡವನ್ನು ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹಾಗೂ ಯುಎಸ್‌ಎಂ-ಕೆಎಲ್‌ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Spread the love ಸೋಷಿಯಲ್‌ ಮೀಡಿಯಾ ಕುರಿತು ಹಲವು ನಟ-ನಟಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತುಗಳನ್ನು ತಿರುಚುವ, ಥಂಬ್‌ನೈಲ್‌ ಮೂಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ